Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಭಯೋತ್ಪಾದನೆ, ಪ್ರತ್ಯೇಕತಾವಾದದಿಂದ ಮುಕ್ತ :ಅಮಿತ್ ಶಾ
(ರಾಜ್ಯ ) ಜಿಲ್ಲೆ

ದೇಶ ಭಯೋತ್ಪಾದನೆ, ಪ್ರತ್ಯೇಕತಾವಾದದಿಂದ ಮುಕ್ತ :ಅಮಿತ್ ಶಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನವದೆಹಲಿ: ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
2024ರಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ದೇಶವೀಗ ನಿರ್ಧರಿಸಿದೆ. ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ರಾಷ್ಟ್ರೀಯ ಸಮಾವೇಶದ ಗುರಿ, 2047ರ ವೇಳೆಗೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಲಕ್ಷ್ಯಕ್ಕಾಗಿ ನಮ್ಮ ಬದ್ಧತೆಯನ್ನು ತೋರಿಸುವುದಕ್ಕಾಗಿ. ಈ ಸಂದೇಶದೊಂದಿಗೆ ನಮ್ಮ ಪಕ್ಷವು ದೇಶದ ಪ್ರತಿಯೊಂದು ಭಾಗವನ್ನು ತಲುಪಲಿದೆ. ಬಿಜೆಪಿ ಮೂರನೇ ಬಾರಿಗೆ ಗೆದ್ದು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದಾಗ ಪ್ರತಿಪಕ್ಷಗಳು ಸಾಕಷ್ಟು ಗದ್ದಲವೆಬ್ಬಿಸಿದ್ದವು. ಆದಾಗ್ಯೂ, ಇಂದು, ವಿಧಿ 370ನ್ನು ತೆಗೆದುಹಾಕಿದ ನಂತರ ಜಮ್ಮು ಮತ್ತು ಕಾಶ್ಮೀರವು ಹೊಸ ಬದಲಾವಣೆಗಳೊಂದಿಗೆ ಪ್ರಗತಿಯ ಹಾದಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ದೇಶವು ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿದ್ದು, ದೇಶದ ಆರ್ಥಿಕತೆ 11 ನೇ ಶ್ರೇಣಿಯಿಂದ 5 ನೇ ಶ್ರೇಣಿಗೆ ಉನ್ನತಿ ಹೊಂದಿದೆ. ಈ 10 ವರ್ಷಗಳಲ್ಲಾದ ಬೆಳವಣಿಗೆಯು, ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂಬುದಕ್ಕೆ ಯಾವುದೇ ಶಂಕೆಗೆ ಆಸ್ಪದ ನೀಡುವುದಿಲ್ಲ.
75 ವರ್ಷಗಳಲ್ಲಿ , ಈ ದೇಶವು 17 ಲೋಕಸಭಾ ಚುನಾವಣೆಗಳು, 22 ಸರ್ಕಾರಗಳು ಮತ್ತು 15 ಪ್ರಧಾನ ಮಂತ್ರಿಗಳಿಗೆ ಸಾಕ್ಷಿಯಾಗಿದೆ ಎಂದು ಗೃಹ ಮತ್ತು ಸಹಕಾರ ಸಚಿವರು ಹೇಳಿದರು.
ದೇಶದ ಹಿಂದಿನ ಪ್ರತಿಯೊಂದು ಸರ್ಕಾರಗಳು ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಮಾಡಲು ಪ್ರಯತ್ನಿಸಿವೆ. ಆದರೆ ಇಂದು ಸಮಗ್ರ ಅಭಿವೃದ್ಧಿ, ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿ, ಪ್ರತಿಯೊಬ್ಬ ವ್ಯಕ್ತಿಯ ಅಭಿವೃದ್ಧಿ ನರೇಂದ್ರ ಮೋದಿಯವರ 10 ವರ್ಷಗಳಲ್ಲಿ ಮಾತ್ರ ನಡೆದಿದೆ ಎಂದು ಯಾವುದೇ ಗೊಂದಲವಿಲ್ಲದೆ ಹೇಳಬಹುದು. ಈ 10 ವರ್ಷಗಳಲ್ಲಿ ಮೋದಿಯವರು ಸ್ವಜನಪಕ್ಷಪಾತ, ಜಾತೀಯತೆ ಮತ್ತು ತುಷ್ಟೀಕರಣವನ್ನು ತೊಡೆದುಹಾಕಲು ಕೆಲಸ ಮಾಡಿದ್ದಾರೆ.
I.N.D.I ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷವು ಯಾವಾಗಲೂ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತೀಯತೆಯನ್ನು ಉತ್ತೇಜಿಸಿದೆ. ಆದರೆ, ಪ್ರಧಾನಿ ಮೋದಿಯವರು ಈ 10 ವರ್ಷಗಳಲ್ಲಿ ದೇಶದಿಂದ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತೀಯತೆಯನ್ನು ತೊಡೆದುಹಾಕಲು ಮತ್ತು ಅಭಿವೃದ್ಧಿಯತ್ತ ಗಮನ ಹರಿಸಲು ಶ್ರಮಿಸಿದ್ದಾರೆ.
ಮತ್ತಷ್ಟು ತೀಕ್ಷ್ಣತೆಯಿಂದ ವಾಗ್ದಾಳಿ ಮುಂದುವರೆಸಿದ ರಾಜಕೀಯ ಚಾಣಕ್ಯ ಷಾ
‘I.N.D.I ಮೈತ್ರಿಕೂಟವು ಏಳು ಕುಟುಂಬ ಆಧಾರಿತ ಪಕ್ಷಗಳ ಒಕ್ಕೂಟವಾಗಿದೆ, ಇದು ದೇಶದಲ್ಲಿ 2G, 3G ಮತ್ತು 4G ರೂಪದಲ್ಲಿದೆ’ ಎಂದರು.
“ನಾನು ಯಾವುದೇ ಮೊಬೈಲ್ ನೆಟ್ವರ್ಕ್ಗಳ ಬಗ್ಗೆ ಹೇಳುತ್ತಿಲ್ಲ, ವಿರೋಧ ಪಕ್ಷದ ಕೌಟುಂಬಿಕ ರಾಜಕಾರಣದ ಬಗ್ಗೆ ಹೇಳುತ್ತಿದ್ದೇನೆ. 2G ಎಂದರೆ ಎರಡು ತಲೆಮಾರುಗಳು, 3G ಎಂದರೆ ಮೂರು ತಲೆಮಾರುಗಳು ಮತ್ತು 4G ಎಂದರೆ ನಾಲ್ಕು ತಲೆಮಾರುಗಳು. ಪ್ರತಿಪಕ್ಷದ ನಾಲ್ಕು ತಲೆಮಾರುಗಳು ಕೌಟುಂಬಿಕ ರಾಜಕೀಯವನ್ನು ಮಾಡುತ್ತಿವೆ. ಈ ದೇಶದ ರಾಷ್ಟ್ರಪತಿಗಳು ಬುಡಕಟ್ಟು ಕುಟುಂಬದಿಂದ ಬಂದವರು. ಬಡ ಬುಡಕಟ್ಟು ಜನಾಂಗದ ಮಗಳನ್ನು ರಾಷ್ಟ್ರಪತಿಯನ್ನಾಗಿ ಮಾಡುವ ಮೂಲಕ ಪ್ರಧಾನಿ ಮೋದಿ ಮತ್ತು ಬಿಜೆಪಿ ಎಲ್ಲಾ ಬುಡಕಟ್ಟು ಜನಾಂಗದವರನ್ನು ಗೌರವಿಸಿದೆ. ಈ ದೇಶದ ಉಪರಾಷ್ಟ್ರಪತಿ ಒಬ್ಬ ರೈತನ ಮಗ. ಬಿಜೆಪಿಯಲ್ಲಿ ಬೂತ್ನಲ್ಲಿ ಕೆಲಸ ಮಾಡುವ ವ್ಯಕ್ತಿ ರಾಷ್ಟ್ರಪತಿಯಾಗಬಲ್ಲ ಮತ್ತು ಪ್ರಧಾನಿ ಕೂಡ ಆಗಬಹುದು. ನಾವು ನಮ್ಮ ಪಕ್ಷವನ್ನು ಪ್ರಜಾಸತ್ತಾತ್ಮಕ ಪಕ್ಷವಾಗಿ ಇಟ್ಟುಕೊಂಡಿರುವ ಕಾರಣ, ಬಿಜೆಪಿ ಪಕ್ಷದಲ್ಲಿ ಮಾತ್ರ ಈ ಸಾಧ್ಯತೆಯಿದೆ” ಎಂದು ಅಮಿತ್ ಶಾ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.