ವಿಜಯಪುರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.೨೬ ಹಾಗೂ ಫೆ.೨೭ರವರಗೆ ಎರಡು ದಿನಗಳ ಕಾಲ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದೆ.
ಉದ್ಯೋಗ ಮೇಳಕ್ಕೆ ಮತ್ತು ೫೦೦ಕ್ಕೂ ಹೆಚ್ಚು ವಿವಿಧ ಬೃಹತ್, ಮಧ್ಯಮ, ಸಣ್ಣ ಮತ್ತು ಇತರೆ ವಲಯದ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಸ್ನಾತಕ್ಕೋತ್ತರ ಪದವಿ, ಇಂಜನೀಯರಿಂಗ್ ಮತ್ತು ವಿವಿಧ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಿ ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು http:/skillconnect.kaushalkar.com ಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಿಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ದೂ: ೦೮೩೫೨-೨೯೭೦೧೯, ಸಹಾಯವಾಣಿ ಸಂಖ್ಯೆ:೧೮೦೦೫೯೯೯೯೧೮ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
