ಸಿಂದಗಿ: ತಾಲೂಕು ಬಿಜೆಪಿ ಮಂಡಲದ ನೂತನ ತಾಲೂಕಾಧ್ಯಕ್ಷರನ್ನಾಗಿ ಗೋಲಗೇರಿ ಗ್ರಾಮದ ಬಿಜೆಪಿ ಮುಖಂಡ ಸಂತೋಷ ಪಾಟೀಲ ಡಂಬಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ.
ಅವರ ಆಯ್ಕೆಗೆ ಮಾಜಿ ಶಾಸಕ ರಮೇಶ ಭೂಸನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ರವಿಕಾಂತ ನಾಯ್ಕೋಡಿ, ಶರಣು ಮನಗೂಳಿ ಬ್ರಹ್ಮದೇವನಮಡು ಸೇರಿದಂತೆ ಭಾಜಪ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಸಂತೋಷ ಪಾಟೀಲ, “ಪಕ್ಷದ ಹಿರಿಯರು, ಮಾಜಿ ಶಾಸಕರು, ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಭರವಸೆಯನ್ನಿಟ್ಟು ತಾಲೂಕಾಧ್ಯಕ್ಷನ ಜವಾಬ್ದಾರಿಯನ್ನು ನೀಡಿದ್ದಾರೆ. ಅದಕ್ಕೆ ಯಾವುದೇ ರೀತಿಯ ಕಪ್ಪು ಚುಕ್ಕೆ ಭಾರದಂತೆ ಜವಾಬ್ದಾರಿಯಿಂದ ಮುನ್ನಡೆಸಿಕೊಂಡು ಹೋಗುತ್ತೇನೆ” ಎಂದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

