ವಿಜಯಪುರ: : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಫೆ.೨೮ರಿಂದ ಮಾರ್ಚ್ ೦೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.೨೮ರಂದು ಮಧ್ಯಾಹ್ನ ೧ ಗಂಟೆಗೆ ಜಿಲ್ಲೆಯ ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೨-೩೦ಕ್ಕೆ ತಾಲೂಕಿನ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಸಂಜೆ ೫ ಗಂಟೆಗೆ ಮುದ್ದೇಬಿಹಾಳದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಿ ಬಾಗಲಕೋಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.೨೯ರಂದು ಮಧ್ಯಾಹ್ನ ೧೨ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮಾರ್ಚ್ ೦೧ ರಂದು ವಿಜಯಪುರದ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಾರ್ಚ್ ೦೨ ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರದಿಂದ ಜಮಖಂಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
