ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಫೆ.೨೧ ರಿಂದ ೨೩ರವರೆಗೆ ಮೂರು ದಿನಗಳ ಕಾಲ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಹಮ್ಮಿಕೊಂಡ ಮಾರಾಟ ಮತ್ತು ವಸ್ತು ಪ್ರದರ್ಶನಕ್ಕೆ ಮಹಾನಗರ ಪಾಲಿಕೆ ಉಪಮಹಾಪೌರ ದಿನೇಶ ಹಳ್ಳಿ ಚಾಲನೆ ನೀಡಿದರು.
ಈ ಮೇಳವು ಪ್ರತಿದಿನ ಬೆಳಿಗ್ಗೆ ೧೦ ರಿಂದ ರಾತ್ರಿ ೯ ಗಂಟೆಯವರೆಗೆ ಸಿದ್ಧ ಉಡುಪು, ಆಹಾರ ವಸ್ತುಗಳು,ಆಯುರ್ವೇದಿಕ ವಸ್ತುಗಳು,ಅಗರಬತ್ತಿ,ಆಟಿಕೆ ವಸ್ತುಗಳ ಮಾರಾಟ ಮೇಳ ಹಾಗೂ ವಸ್ತು ಪ್ರದರ್ಶನವನ್ನು ನಡೆಯಲಿದೆ. ವಸ್ತು ಪ್ರದರ್ಶನದಲ್ಲಿ ೩೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ.
ಈ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗೀಡದ, ಸುಭಾಷ ಪಾಟೀಲ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

