ಬಸವನಬಾಗೇವಾಡಿ: ತಾಲೂಕಿನ ಅರಳಿಚಂಡಿ ಗ್ರಾಮದಲ್ಲಿ ಫೆ.22 ರಂದು ಬೆಳಗ್ಗೆ 9 ಗಂಟೆಗೆ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ತಾಲೂಕು ಮಟ್ಟದ ವಾಲ್ಮೀಕಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ರಾಜನಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಮಹರ್ಷಿ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಾನಿಧ್ಯವನ್ನು ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಸಿದ್ದಲಿಂಗ ಸ್ವಾಮೀಜಿ, ಅರಳಿಚಂಡಿಯ ಅವ್ಬಪ್ಪ ಮುತ್ಯಾ, ಪರಮಾನಂದ ಮಹಾರಾಜರು, ರಾಜನಾಳದ ಹುಚ್ಚಪ್ಪ ಮುತ್ಯಾ ವಹಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಮಾಜಿ ಸಚಿವ ವಿ.ಎಸ್. ಉಗ್ರಪ್ಪ ಉದ್ಘಾಟಿಸುವರು. ಮಾಜಿ ಸಚಿವ ಬಿ.ರಾಮಲು ಭಾವಚಿತ್ತಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಮಾಜಿ ಸಚಿವ ನರಸಿಂಹನಾಯಕ ಜ್ಯೋತಿ ಬೆಳಗಿಸುವರು. ಮುಖ್ಯ. ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಜೆಡಿಎಸ್ ಧುರೀಣ ಅಪ್ಪುಗೌಡ ಪಾಟೀಲ, ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಇಂಗಳೇಶ್ವರ ಗ್ರಾಪಂ ಅಧ್ಯಕ್ಷ ಬನ್ನೆಪ್ಪ ಡೋಣೂರ, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಲ್ಲಪ್ಪ ಕೌಲಗಿ, ಯಾದಗಿರಿ ಜಿಲ್ಲಾ ವಾಲ್ಮೀಕಿ ಸಮಾಜದ ಗೌರವಾಧ್ಯಕ್ಷ ಸಿದ್ದನಗೌಡ ಪೊಲೀಸಪಾಟೀಲ, ವಿಜಯಪುರ ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಿ.ಜಿ.ಬಿರಾದಾರ, ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷ ರವಿ ನಾಯ್ಕೋಡಿ, ವಕೀಲ ಶಶಿಧರ ಯರನಾಳ, ಭೀಮಣ್ಣ ಹೊಸಮನಿ, ಶಿವಪ್ಪ ಶಾಖಾಪೂರ, ಎಸ್.ಎಸ್.ಸೊನ್ನದ, ಸೋಮಣ್ಣ ಹೆಗಡ್ಯಾಳ ಆಗಮಿಸುವರು. ಉಪನ್ಯಾಸಕ ಯಲ್ಲಪ್ಪ ನಾಯಕ ಉಪನ್ಯಾಸ ನೀಡುವರು. ಕಾರ್ಯಕ್ರಮದಂಗವಾಗಿ ರಾತ್ರಿ 9.30 ಗಂಟೆಗೆ ವೀರಸಿಂಹ ಸಿಂಧೂರ ಲಕ್ಷ್ಮಣ ನಾಟಕ ಪ್ರದರ್ಶನವಿದೆ ಎಂದು ಪ್ರಕಟನೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
