ಸಿಂದಗಿ: ಜಿಲ್ಲೆಯ ಐದು ಶಾಲೆಗಳಲ್ಲಿ ಗಣಿಹಾರ ಆಯ್ಕೆ ಮಾಡಿಕೊಂಡಿದ್ದು ಸಂತಸ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನ ಶಾಲೆ ಮಕ್ಕಳಿಗೆ ಬಹು ಪೌಷ್ಟಿಕಾಂಶವುಳ್ಳ ರಾಗಿ ಮಾಲ್ಟ ಹೆಲ್ತ್ ಮಿಕ್ಸ್ ವಿತರಿಸುವ ಸರ್ಕಾರದ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆಯ್.ಎಸ್.ಟಕ್ಕೆ ಹೇಳಿದರು.
ತಾಲೂಕಿನ ಗಣಿಹಾರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಕೆಎಂಎಫ್ ಸಹಭಾಗಿತ್ವದಲ್ಲಿ ಸರಕಾರದ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಹಮ್ಮಿಕೊಂಡ ರಾಗಿ ಹೆಲ್ತ್ ಮಿಕ್ಸ್ ವಿತರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ವಾರಕ್ಕೆ ಮೂರು ದಿನ ಮೊಟ್ಟೆ, ಬಾಳೆಹಣ್ಣು ಕೊಡುವ ಕಾರ್ಯಕ್ರಮ, ಹಾಲು ವಿತರಿಸುವ ಕಾರ್ಯಕ್ರಮ ನಿರಂತರವಾಗಿ ನಡೆದಿದ್ದು, ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಇಂದಿನಿಂದ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು .
ಇದೇ ಸಂದರ್ಭದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಪ್ರಭಾರಿ ಸಹನಿರ್ದೇಶಕ ಎಂ.ಬಿ.ಯಡ್ರಾಮಿ ಮಾತನಾಡಿ, ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗಬೇಕು. ಮತ್ತು ಮಕ್ಕಳಿಗೆ ಪೌಷ್ಟಿಕಾಂಶ ಕೊರತೆಯಾಗಬಾರದು. ಎಲ್ಲ ವರ್ಗದ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಶಿಕ್ಷಣದಿಂದ ಸ್ವಾಭಿಮಾನ, ಜ್ಞಾನದ ಬೆಳವಣಿಗೆ ಮಾತ್ರ ಸಾಧ್ಯ. ಶಿಕ್ಷಕರು ಕೇವಲ ಓದು ಬರಹ ಕಲಿಸುವುದಲ್ಲ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಕಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಎಸ್.ಎಂ ಪಾಟೀಲ, ಎಫ್.ಆರ್.ಕಾಚೂರ, ಪಿ.ಆರ್.ಓಲೇಕಾರ ಡಿ.ಎಂ ಮಾಹೂರ ಎಸ್‌ಡಿಎಂಸಿ ಅಧ್ಯಕ್ಷ ಸುಧಾ ನೆನಶೆಟ್ಟಿ, ಉಪಾಧ್ಯಕ್ಷ ರಮೇಶ್ ಕೋರಿ, ದಾದಾಪೀರ್ ಅಂಗಡಿ, ಗುರುನಾಥ ಸುಣಗಾರ, ಶರಣಗೌಡ ಆನಗೊಂಡ, ಎಂ.ಡಿ ಕೆರಕಿ, ಎಂ.ಎ ಅರಬ, ಸಿದ್ದಲಿಂಗ ಚೌಧರಿ, ಬಸವರಾಜ ಹಳ್ಳಿ ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

