ಸಿಂದಗಿ: ನಗರದ ಮಂದಾರ ಪಬ್ಲಿಕ್ ಸ್ಕೂಲ್ ಹಾಗೂ ನ್ಯಾಶನಲ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಫೆ.೨೪ ಶನಿವಾರದಂದು ಸಾಯಂಕಾಲ ೪ಗಂಟೆಗೆ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮಂದಾರ ಸಿರಿ ಉತ್ಸವ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಸಮಾರಂಭ ಜರುಗುವುದು ಎಂದು ಕಾರ್ಯಕ್ರಮದ ಸಂಚಾಲಕ ಅಭಿಷೇಕ ಚೌಧರಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಂದಗಿ ಆದಿಶೇಷ ಮಠದ ನಾಗರತ್ನ ವೀರರಾಜೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಆದರ್ಶ ವಿದ್ಯಾಲಯದ ಪ್ರಾಚಾರ್ಯ ಎಸ್.ಕೆ.ಬಿರಾದಾರ ಸಭೆ ಅಧ್ಯಕ್ಷತೆ ವಹಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಕಾರ್ಯಕ್ರಮ ಉದ್ಘಾಟಿಸುವರು. ಅಲ್ಪಸಂಖ್ಯಾತ ಮುರಾರ್ಜಿ ವಸ್ತಿ ಶಾಲೆಯ ಪ್ರಾಚಾರ್ಯ ಸಿದ್ದಪ್ಪ ಕಾರಿಮುಂಗಿ, ಕಾವ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಚಂದ್ರಶೇಖರ ನಾಗರಬೆಟ್ಟ, ದೈಹಿಕ ಶಿಕ್ಷಕ ಸಂಗನಗೌಡ ಹಚಡದ, ಎಸ್‌ಪಿ ಡೆವಲಪರ್ಸ್ನ ಸಲೀಂ ಮರ್ತೂರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಚ್.ಬಿರಾದಾರ ಸಿಆರ್‌ಪಿ ಸಿ.ಎನ್.ಸಿರಕನಳ್ಳಿ. ಎನ್‌ಪಿಎಸ್ ಅಧ್ಯಕ್ಷ ಶಿವಕುಮಾರ ಕಲ್ಲೂರ ಅತಿಥಿಗಳಾಗಿ ಭಾಗವಹಿಸುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
