ವಿಜಯಪುರ: ವಿಜಯ ಜೋಶಿ ಅವರನ್ನು ವಿಜಯಪುರ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರನ್ನಾಗಿ ಮತ್ತೊಮ್ಮೆ ನೇಮಕ ಮಾಡಲಾಗಿದೆ.
ಕಳೆದ ಅವಧಿಯಲ್ಲಿ ಇದೇ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ್ದ ವಿಜಯ ಜೋಶಿ ಅವರ ಕಾರ್ಯ ವೈಖರಿಗೆ ಮಾನ್ಯತೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದಾರೆ.
ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವ ಮೂಲಕ, ಪಕ್ಷದ ಸಂಘಟನೆಗೆ ಕ್ರಿಯಾತ್ಮಕ ಕೊಡುಗೆ ನೀಡುವಿರೆಂದು ಆಶಿಸುತ್ತಾ, ಪಕ್ಷದ ಎಲ್ಲ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಭಾಗವಹಿಸುವಿರೆಂದು ಆಶಿಸುತ್ತೇನೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ನೇಮಕ ಪತ್ರದಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

