ವಿಜಯಪುರ: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು.
ಆದೇಶ ಪತ್ರ ವಿತರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ದೇಶಾಭಿಮಾನ, ದೇಶದ ಪ್ರಗತಿಯನ್ನೇ ಉಸಿರಾಗಿಸಿಕೊಂಡಿರುವ ಹೆಮ್ಮೆಯ ಪಕ್ಷ ಬಿಜೆಪಿ. ಬಿಜೆಪಿಯ ಕಾರ್ಯಕರ್ತ ಎನ್ನುವುದೇ ಒಂದು ಅಭಿಮಾನದ ಸಂಗತಿ. ದೇಶದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಬೇಕಿದೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಪ್ಪು ಹಣದ ವಿರುದ್ದ ಸಮರ, ಕಿಸಾನ್ ಸಮ್ಮಾನ್ ಮೊದಲಾದ ಯೋಜನೆಗಳು ಜನಸಾಮಾನ್ಯರಿಗೆ ಮುಟ್ಟಿವೆ, ಈ ರೀತಿಯ ಅಭಿವೃದ್ಧಿ ಪರಂಪರೆ ಮುಂದುವರೆಯಲು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಶ್ರಮಿಸಬೇಕು, ಪಕ್ಷ ಅನೇಕ ಕಾರ್ಯಕರ್ತರಿಗೆ ನೂತನ ಜವಾಬ್ದಾರಿ ನೀಡಿದೆ, ಈ ಎಲ್ಲರೂ ತಮಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಓಬಿಸಿ ಮೋರ್ಚ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಾಬು ಮಾಶಾಳ, ಈರಣ್ಣ ರಾವೂರ, ಮಲ್ಲನಗೌಡ ಪಾಟೀಲ, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಸಪ್ನಾ ಕಣ್ಮುಚ್ಚಿನಾಳ ವೇದಿಕೆ ಮೇಲೆ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

