ವಿಜಯಪುರ: ಕರ್ನಾಟಕ ಸರ್ಕಾರ ೨೦೨೩-೨೦೨೪ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ-ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮಿಡ್ ಸೀಸನ್ ಅಡ್ವರ್ಸಿಟಿ ಇನ್ವೊಕ್ ಅಧಿಸೂಚನೆ ಹೊರಡಿಸಿದೆ. ಜಿಲ್ಲೆಯಲ್ಲಿ ೧೩ ತಾಲೂಕಿನ ಮಳೆಯಾಶ್ರಿತ ತೊಗರಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ನಷ್ಟದ ಪರಿಹಾರದಲ್ಲಿ ೨೫% ಹಣವನ್ನು ರೈತರಿಗೆ ನೀಡಲು ಸರ್ಕಾರ ಆದೇಶ ಹೊರಡಿಸಲಾಗಿತ್ತು. ಅದರಂತೆ ಜಿಲ್ಲೆಯ ತೊಗರಿ ಬೆಳೆದ ರೈತರ ಖಾತೆಗೆ ೮೫.೫೦ ಕೋಟಿ ಬೆಳೆಗೆ ವಿಮೆ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
