Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಡಿಸಿ ಮುರಗಿ ಸೂಚನೆ
(ರಾಜ್ಯ ) ಜಿಲ್ಲೆ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಡಿಸಿ ಮುರಗಿ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾ.೧ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | ಜಿಲ್ಲೆಯಲ್ಲಿ ೫೯ ಪರೀಕ್ಷೆ ಕೇಂದ್ರಗಳು | ಒಟ್ಟು ೩೧,೯೨೧ ವಿದ್ಯಾರ್ಥಿಗಳು

ವಿಜಯಪುರ: ಜಿಲ್ಲಾದ್ಯಂತ ಮಾರ್ಚ ೧ ರಿಂದ ೨೨ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು, ಜಿಲ್ಲೆಯ ೫೯ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು ೩೧,೯೨೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ರವಾನಿಸಲು ೨೨ ರೂಟ್‌ಗಳನ್ನು ಮಾಡಲಾಗಿದೆ. ತಹಶೀಲ್ದಾರರು, ಉಪ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರನ್ನೊಳಗೊಂಡ ತ್ರಿ-ಸದಸ್ಯ ಸಮಿತಿ ರಚಿಸಿಲಾಗಿದೆ. ತ್ರಿ-ಸದಸ್ಯ ಸಮಿತಿ ಸದಸ್ಯರು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕುರಿತು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಡಿಸಿ ಸೂಚನೆ ನೀಡಿದರು.
ಪರೀಕ್ಷೆಗಳು ಅತೀ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ನಿಗದಿತ ಮಾರ್ಗದಲ್ಲಿ ಚಲಿಸಿ, ನಿಖರ ಸಮಯಕ್ಕೆ ತಲುಪಿಸಬೇಕು. ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಯ ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು ಎಂದು ಅವರು ಸೂಚನೆ ನೀಡಿದರು.
ಎಲ್ಲ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕೊಠಡಿ ಮೇಲ್ವಿಚಾರಕರು ಅತ್ಯಂತ ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಅತ್ಯಂತ ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಈ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ್ ಮಾರಿಹಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಪ್ರಾಂಶುಪಾಲರಾದ ಕೆ.ಎ.ಉಪ್ಪಾರ, ಜಿಲ್ಲೆಯ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಪ್ರಶ್ನೆ ಪತ್ರಿಕೆ ವಿತರಣಾ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು, ಪರೀಕ್ಷಾ ಉಪ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.