Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಟ್ಟಿ ಭಾಗ್ಯಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ :ಕುಚಬಾಳ
(ರಾಜ್ಯ ) ಜಿಲ್ಲೆ

ಬಿಟ್ಟಿ ಭಾಗ್ಯಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ :ಕುಚಬಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ

ವಿಜಯಪುರ: ರಾಜ್ಯ ಕಾಂಗ್ರೆಸ್ ಸರಕಾರ ಎಸ್.ಸಿ./ಎಸ್.ಟಿ. ಸಮುದಾಯಕ್ಕೆ ಮೀಸಲಾದ ಎಸ್.ಇ.ಪಿ. ಟಿ.ಇ.ಪಿ. ಯೋಜನೆಯಲ್ಲಿನ ಅಂದಾಜು ೧೧,೬೦೦ ಕೋಟಿ ಅನುದಾನವನ್ನು ಕಡಿತ ಮಾಡಿ ಬೇರೆ ಯೋಜನೆಗಳಿಗೆ ಉಪಯೋಗಿಸಿ ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಎಸ್.ಸಿ. ಮತ್ತು ಎಸ್.ಟಿ. ಮೋರ್ಚಾ ವತಿಯಿಂದ ಪ್ರತಿಭಟನೆ ಶುಕ್ರವಾರ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನಗರದ ಗಾಂಧಿ ಸರ್ಕಲ್‌ನಿಂದ ಪ್ರತಿಭಟನೆ ಹೊರಟು ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ರಾಜ್ಯ ಕಾಂಗ್ರೆಸ್ ಸರಕಾರದ ಬಿಟ್ಟಿ ಭಾಗ್ಯ ಯೋಜನೆಗಳಿಂದ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದಿಂದ ಪ್ರತಿ ವರ್ಷ ೬ ಸಾವಿರ ರೂ. ರಾಜ್ಯ ಸರಕಾರದಿಂದ ೪ ಸಾವಿರ ರೂ. ಸೇರಿ ಒಟ್ಟು ೧೦ ಸಾವಿರ ದೊರೆಯುತ್ತಿತ್ತು. ಅದೇ ರೀತಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಜಾರಿಯಲ್ಲಿತ್ತು. ಇಂತಹ ಅನೇಕ ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ನಿಲ್ಲಿಸಿದೆ. ಈ ಸರಕಾರ ಬಂದು ೯ ತಿಂಗಳು ಗತಿಸುತ್ತ ಬಂದರೂ ಈ ವರೆಗೆ ಹೊಸ ಯೋಜನೆಗಳ ಜಾರಿಗೆ ಮುಂದಾಗಿಲ್ಲ. ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮಾತನಾಡಿದರು.
ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್ ಮೀಸೆ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ರವಿಕಾಂತ ವಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮುಖಂಡ ವಿಜುಗೌಡ ಪಾಟೀಲ, ಅರುಣ ಶಹಾಪುರ, ಸಂಗಣ್ಣ ಬೆಳ್ಳುಬ್ಬಿ, ಸಂಜೀವ ಐಹೊಳ್ಳೆ, ಪ್ರಕಾಶ ಅಕ್ಕಲಕೋಟ, ಅನೀಲ ಜಮಾದಾರ, ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ, ಭರತ ಕೋಳಿ, ಶೀತಲಕುಮಾರ ಓಗಿ, ಪ್ರವೀಣ ನಾಟಿಕಾರ, ರಾಜು ಮಗಿಮಠ, ಶಿವಾನಂದ ಮಖಣಾಪೂರ, ಶ್ರೀನಿವಾಸ ಕಂದಗಲ್, ಗೋಪಾಲ ಘಟಕಾಂಬಳೆ, ಚಿದಾನಂದ ಚಲವಾದಿ, ಸ್ವಪ್ನಿ ಕಣಮುಚನಾಳ, ಹಣಮಂತ ಬಿರಾದಾರ, ಗೀತಾ ಕುಗನೂರ, ಸ್ವಾಮಿ ಮಾಶ್ಯಾಳ, ಮಳನಗೌಡ ಪಾಟೀಲ, ಈರಣ್ಣ ರಾವೂರ, ಎಸ್.ಎ. ಪಾಟೀಲ, ಕೃಷ್ಣಾ ಗುನ್ಹಾಳಕರ, ವಿಜಯ ಜೋಶಿ, ರಾಜೇಶ ತವಸೆ, ಶಿವರುದ್ರ ಬಾಗಲಕೋಟ, ಜವಾಹರ ಗೋಸಾವಿ, ಪ್ರೇಮಾನಂದ ಬಿರಾದಾರ, ವಿಠ್ಠಲ ಹೊಸಪೇಟ, ಮಹೇಶ ಒಡೆಯರ್, ರಾಜು ಕುರಿಯವರ್, ಭೀಮಾಶಂಕರ ಹದನೂರ, ವಿನಾಯಕ ದಹಿಂಡೆ, ವಿಕ್ರಂ ಗಾಯಕವಾಡ, ಶ್ರೀಕಾಂತ ಶಿಂಧೆ, ಸಂದೀಪ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.