ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ.೨೯, ಮಾಚ್ ೧ ಹಾಗೂ ೨ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪಧೆಗಳನ್ನು ಆಯೋಜಿಸಲಾಗಿದೆ.
ಫೆ.೨೯ರ ಬೆಳಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಯಶವಂತರಾಯಗೌಡ ಪಾಟೀಲ, ಹಣಮಂತ. ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ,ಅಶೋಕ ಮನಗೂಳಿ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ ಅಬ್ದುಲರಜಾಕ ಹೊರ್ತಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
