ವಿಜಯಪುರ: ರೋಟರಿ ದಿನಾಚರಣೆಯ ಅಂಗವಾಗಿ ನಗರದ ಸಂಜೀವಿನಿ ಶಿಕ್ಷಣ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಬಿಜಾಪುರ್ ಉತ್ತರ ಹಾಗು ಜಿಲ್ಲಾ ರಕ್ತ ಕೇಂದ್ರ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಸಂಜೀವಿನಿ ಫಾರ್ಮೆಸಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ರಾಜಶೇಖರ್ ಡಂಬಳ್ ಮಾತನಾಡಿ, ವಿಶ್ವದಲ್ಲಿ ಪೋಲಿಯೋ ನಿರ್ಮೂಲನಕ್ಕಾಗಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು, ಸಂಸ್ಥೆ ಅನೇಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜ, ದೇಶದ ಅಭಿವೃದ್ದಿಯಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡುವ ಮೂಲಕ ಸ್ವಸ್ಥ ಸುಂದರ ಸಮಾಜ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ಸಂಜೀವಿನಿ, ಫಾರ್ಮಸಿ, ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿಧ್ಯಾರ್ಥಿಗಳು ರಕ್ತದಾನ ಮಾಡಿದರು.
ಸಂಸ್ಥೆಯ ಅಧ್ಯಕ್ಷ ಡಾ.ಸಿದ್ದಪ್ಪ ಸೊನ್ನದ ಹಾಗೂ ಪ್ರಾಚಾರ್ಯ ಬಸವರಾಜ್ ಸೊನ್ನದ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿಸಿದರು.
ರೋಟರಿ ಕ್ಲಬ್ಬಿನ ಅಧ್ಯಕ್ಷ ಮಲ್ಲು ಕಲಾದಗಿ, ಕಾರ್ಯದರ್ಶಿ ರಾಜ ಶಾಹ, ಡಾ. ಪ್ರಾಣೇಶ್ ಜಾಗೀರ್ದಾರ್, ಸಂತೋಷ್ ಜಾರಸಂಗ, ವಾಡೆಕರ್, ಮೋಹನ್ ಬಗಲಿ ಉಪಸ್ತಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

