Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ ಮಾರುಕಟ್ಟೆ ವ್ಯವಸ್ಥೆ ಸುಧಾರಣೆಗೆ ರೈತ ಸಂಘ ಸಲಹೆ
(ರಾಜ್ಯ ) ಜಿಲ್ಲೆ

ಕೃಷಿ ಮಾರುಕಟ್ಟೆ ವ್ಯವಸ್ಥೆ ಸುಧಾರಣೆಗೆ ರೈತ ಸಂಘ ಸಲಹೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ರೈತ ಪರವಾಗಿ ಎಪಿಎಂಸಿ ಕಾಯ್ದೆಗೆ ಹಲವು ತಿದ್ದುಪಡಿ ತಂದಿರುವುದು ಸೂಕ್ತವಾಗಿದೆ. ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಬಲಪಡಿಸಲು ಕೆಲವು ಸುಧಾರಣೆಗಳನ್ನು ತರಬೇಕಿದ್ದು, ಈ ಸಂಬಂಧ ರೈತ ಸಂಘ ಶೀಘ್ರದಲ್ಲಿ ಸುಧಾರಣೆಗೆ ಪೂರಕ ಅಂಶಗಳನ್ನು ತಮ್ಮ ಗಮನಕ್ಕೆ ತರಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದಿದ್ದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದಿರುವುದಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿ ಪತ್ರ ಬರೆದಿರುವ ಅವರು, ಎಂ.ಎಸ್. ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವ ನೀತಿ ರೂಪಿಸಿದರೆ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ತಿದ್ದುಪಡಿ ಕಾಯಿದೆಯನ್ನು ವಾಪಸ್ಸು ಪಡೆದಿರುವುದು ಅಭಿನಂದನಾರ್ಹ. ಇದಕ್ಕಾಗಿ ವಿಶೇಷವಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ರೈತ ಸಂಘ ಕೃತಜ್ಞತೆ ಸಲ್ಲಿಸುತ್ತದೆ. ಎಪಿಎಂಸಿ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಿರುವುದು ಸೂಕ್ತವಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ರೈತ ಸ್ನೇಹಿಯಾಗಿಸಲು ಇನ್ನೂ ಹಲವಾರು ಸುಧಾರಣೆಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಹೋಬಳಿ ಮಟ್ಟದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಬೇಕು. ರೈತರ ಬಳಿಗೆ ಮಾರುಕಟ್ಟೆ ವಿಸ್ತಾರವಾಗಬೇಕು. ಎಲ್ಲ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಸುವ ನೀತಿಯನ್ನು ಗಟ್ಟಿಗೊಳಿಸಬೇಕು ಎಂದು ತಿಳಿಸಿರುವ ಅವರು, ಇನೂ ಹಲವಾರು ಸಲಹೆಗಳನ್ನು ಶೀಘ್ರದಲ್ಲಿ ಸರ್ಕಾರದ ಮುಂದೆ ಇಡಲಾಗುವುದು ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.