Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿಗೆ ಆದ್ಯತೆ ನೀಡಿ :ಜಿಪಂ ಸಿಇಒ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಕುಡಿವ ನೀರಿಗೆ ಆದ್ಯತೆ ನೀಡಿ :ಜಿಪಂ ಸಿಇಒ ರಿಷಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ ಹಾಗೂ ಸಿಂದಗಿ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ-ಪರಿಶೀಲನೆ

ವಿಜಯಪುರ: ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿಗೆ ಪ್ರಥಮಾಧ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫೆ.೨೪ರಂದು ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಒದಗಿಸಲು ಕ್ರಮವಹಿಸಿಬೇಕು. ಯಾವುದೇ ರೀತಿಯ ಸಮಸ್ಯೆಯಾಗದಂತೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಆಲಮೇಲ ತಾಲೂಕಿನ ಕಡಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಶಾಲಾ ಆಟದ ಮೈದಾನ, ಶೌಚಾಲಯ, ಶಾಲಾ ಕಾಂಪೌಂಡ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತಾನುಸಾರ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಕೊಠಡಿ ವೀಕ್ಷಿಸಿ ಅಗತ್ಯ ವಿದ್ಯುತ್ ಸಂಪರ್ಕ, ಕುಡಿಯುವ ನೀರು ಇರುವಂತೆ ನಿಗಾವಹಿಸಬೇಕು. ಕಲಿಕಾ ಗುಣಮಟ್ಟ ಕಾಪಾಡಿಕೊಳ್ಳಬೇಕು. ಪಾಠದಲ್ಲಿ ಪರಿಹಾರ ಬೋಧನಾ ಕ್ರಮ ಅನುಸರಿಸಬೇಕು. ಕಲಿಕಾ ಚಟುವಟಿಕೆಗೆ ಒತ್ತು ನೀಡಬೇಕು. ಕಲಿಕೆಗೆ ಪೂರಕವಾಗಿ ಬೋಧನಾ ಸಾಮಗ್ರಿಗಳ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಬೋಧನಾ ಸಾಮಗ್ರಿಯೊಂದಿಗೆ ಪಾಠ ಮಾಡಬೇಕು ಎಂದು ಶಾಲಾ ಶಿಕ್ಷಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಿಂದಗಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ, ಆಲಮೇಲ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಫರೀದಾ ಪಠಾಣ, ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಆಲಮೇಲ ತಾಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಮ ಅಂಕಲಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಆರ್ ಸ್ವಾಮಿ, ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಎ.ಎ.ದುರ್ಗದ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ವೈ ಮುರಾಳ, ಸಿಂದಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ, ಕೊಕಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ ಅಮೀನಗಡ, ಕಡಣಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶರಣಗೌಡ ಕಡ್ಲೆವಾಡ, ಗ್ರಾಮ ಪಂಚಾಯತಿಯ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.