ದೇವರಹಿಪ್ಪರಗಿ: ಕಾರ್ಯ ನಿರತ ಪತ್ರಕರ್ತರ ಸಂಘ ದೇವರಹಿಪ್ಪರಗಿ ಮತ್ತು ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ವತಿಯಿಂದ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಏರ್ಪಡಿಸಿದ “ಕರ್ನಾಟಕ ಸುವರ್ಣ ಸಂಭ್ರಮಾಚರಣೆ ” ಕಾರ್ಯಕ್ರಮದಲ್ಲಿ ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ (ರಿ)ವು ಜಾನಪದ ಕ್ಷೇತ್ರದಲ್ಲಿ ೬ ವರ್ಷಗಳಲ್ಲಿ ೪೦ ಕಾರ್ಯಕ್ರಮ ಹಮ್ಮಿಕೊಂಡು ಜಾನಪದ ಉಪನ್ಯಾಸ, ಜಾನಪದ ಕಲಾ ಪ್ರದರ್ಶನ, ಕಲಾವಿದರ ಸನ್ಮಾನ, ಸಾಧಕರ ಸನ್ಮಾನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾನಪದ ಉಳಿವಿಗಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ “ಸುವರ್ಣ ಕರ್ನಾಟಕ ಪ್ರಶಸ್ತಿ” ನೀಡಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ವೀರೇಶಗೌಡ ಪಾಟೀಲ (ಮಿಣಜಗಿ)ಯವರಿಗೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಅಶೋಕ ಶಾಬಾದಿ, ಕಾಂಗ್ರೆಸ್ ಮುಖಂಡ ಡಾ ಪ್ರಭುಗೌಡ ಲಿಂಗದಳ್ಳಿ , ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ, ಕಾನಿಪ ತಾಲೂಕಾಧ್ಯಕ್ಷ ಸಂಗಮೇಶ ಉತ್ನಾಳ, ಡಿ ಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಗ್ರಾಂ ಪಂ ಅಧ್ಯಕ್ಷೆ ಮಹಾದೇವಿ ಆಕಳವಾಡಿ, ಉಪಾಧ್ಯಕ್ಷೆ ಕಸ್ತೂರಿ ಹೊಸಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

