ಚಡಚಣ: ಪಟ್ಟಣದ ಸಂಗಮೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದ ಹತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯು ಉಚಿತ ಶಿಕ್ಷಣ ನೀಡಲಿದೆ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಎಸ್. ಚೋರಗಿ ಹೇಳಿದರು.
ಮಹಾವಿದ್ಯಾಲಯ ನಡೆಸಿದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಮೊದಲ ಹತ್ತು ಸ್ಥಾನ ನಡೆದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಮನೋಜ ಕಟಗೇರಿ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ಶಿಕ್ಷಣ ಕಲಿತ ಸಂಸ್ಥೆ ಇದಾಗಿದ್ದು, ಜಾಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಂಸ್ಥೆಯ ಅಧ್ಯಕ್ಷರು ಮತ್ತು ನಿರ್ದೇಶಕರು ಹತ್ತು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ನಿರ್ಧಾರ ಕೈಕೊಂಡಿದ್ದಾರೆ ಎಂದರು.
ವಿದ್ಯಾರ್ಥಿಗಳಾದ ಸ್ನೇಹಾ ಪಾಟೀಲ, ಮಲ್ಲಿಕಾರ್ಜುನ ಸದ್ದಲಗಿ, ಸುಹಾನಿ ಭೋಹಿ, ಬಸವರಾಜ ಕೋಳಿ, ಐಶ್ವರ್ಯಾ ಪಾಟೀಲ, ಸಂತೋಷ ಹಾವಿನಾಳ, ಲಕ್ಷ್ಮೀ ನಂದೂರ, ಆಕಾಶ ಬಗಲಿ, ಮಲ್ಲಿಕಾ ಕಂಟಿಕರ, ಉಪನ್ಯಾಸಕರಾದ ಬಸವರಾಜ ಅಂಡಗಿ, ಭಾಷಾ ಭಾವಿಪಟೇಲ, ಬಾಲವರ್ಧನ ರೆಡ್ಡಿ, ನಾಗರಾಜ ಹೊನಮೊಡೆ, ಸವಿತಾ ಬಿರಾದಾರ ಮತ್ತು ಪಾಲಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

