ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಎಂಸಿಎ ಡಾ.ಫಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆಯ ನಂತರ ಖಾಲಿ ಉಳಿದಿರುವ ೨೦೨೩-೨೪ನೇ ಸಾಲಿನ ಸೀಟುಗಳನ್ನು ಭರ್ತಿ ಮಾಡಲು ವಿಶ್ವವಿದ್ಯಾನಿಲಯದ ಸಾಮಾನ್ಯ ಪರೀಕ್ಷೆಯನ್ನು ಮಾ.೪ರಂದು ನಡೆಸಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು www.rcub.ac.in ನಿಂದ ಡೌನಲೋಡ್ ಮಾಡಿಕೊಂಡು ಧೃಡೀಕೃತ ದಾಖಲೆಗಳೊಂದಿಗೆ ಮಾರ್ಚ ೧ರ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿ ದೃಢೀಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಗಣಕ ವಿಜ್ಞಾನ ವಿಭಾಗಕ್ಕೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯ ಅಂತರ್ಜಾಲ ಅಥವಾ ಡಾ.ಫಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರವನ್ನು (೦೮೩೧-೨೫೬೫೨೪೪)ನ್ನು ಸಂಪರ್ಕಿಸಬಹುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
