Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಧಾನಮಂಡಲ ಅಧಿವೇಶನದಲ್ಲಿ ಭಾರಿ ಗದ್ದಲ-ಕೋಲಾಹಲ!
(ರಾಜ್ಯ ) ಜಿಲ್ಲೆ

ವಿಧಾನಮಂಡಲ ಅಧಿವೇಶನದಲ್ಲಿ ಭಾರಿ ಗದ್ದಲ-ಕೋಲಾಹಲ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉಭಯ ಸದನಗಳಲ್ಲಿ ಗದ್ದಲ | ಕಲಾಪ ಮುಂದೂಡಿಕೆ | ಪಾಕ್ ಪರ ಘೋಷಣೆ ವಿವಾದ

ಬೆಂಗಳೂರು: ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌ ಬೆಂಬಲಿಗರಿಂದ ವಿಧಾನಸೌಧ ಕಾರಿಡಾರ್‌ನಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕುರಿತ ವಿವಾದ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಭಾರಿ ಗದ್ದಲ, ಕೋಲಾಹಲ ಉಂಟು ಮಾಡಿದ್ದರಿಂದ ಕಲಾಪವನ್ನು ಎರಡು ಬಾರಿ, ಕೊನೆಗೆ ನಾಳೆಗೆ ಮುಂದೂಲಾಯಿತು.
ಕಲಾಪ ಆರಂಭವಾಗುತ್ತಿದ್ದಂತೆಯೇ ಈ ವಿಚಾರ ಕುರಿತು ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಸ್ಥಿತಿಯನ್ನು ಅರಿತು ಮಾರ್ಷಲ್ ಗಳು ಸದನದ ಬಾವಿಗೆ ಧಾವಿಸಿದರು. ತೀವ್ರ ಗದ್ದಲ, ಕೋಲಾಹಲದಿಂದ ಸದನವನ್ನು ಎರಡು ಬಾರಿ ಮುಂದೂಡಲಾಗಿತ್ತು.
ಗದ್ದಲದ ನಡುವೆ ಕೆಲ ಮಸೂದೆಗಳನ್ನು ಅಂಗೀಕರಿಸಲಾಯಿತು. ಭೋಜನ ವಿರಾಮದ ನಂತರವೂ ಗದ್ದಲ, ಕೋಲಾಹಲ ಮುಂದುವರೆದಿದ್ದರಿಂದ ಉಭಯ ಸದನಗಳನ್ನು ದಿನದ ಮಟ್ಟಿಗೆ ಮುಂಡೂಲಾಯಿತು. ಇದಕ್ಕೂ ಮುನ್ನ ಕೆಲ ಶಾಸಕರು ವಿಧಾನಸೌಧ ಬಳಿ ಪ್ರತಿಭಟನೆ ನಡೆಸಲು ವಿಧಾನಸಭೆಯಿಂದ ಹೊರಗೆ ಬಂದರು.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ಗೆ ಉತ್ತರ ನೀಡಬೇಕಿತ್ತು. ಆದರೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸದಸ್ಯರು ವಿಧೇಯಕಗಳ ಪ್ರತಿಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ಎಸೆದರು. ಈ ಸಂದರ್ಭದಲ್ಲಿ ವಿಧಾನಸಭೆಯನ್ನೂ ಎರಡು ಬಾರಿ ಮುಂದೂಡಲಾಯಿತು.
ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ವಿಧಾನಸೌಧ ಕೇವಲ ಕಟ್ಟಡವಲ್ಲ, 7 ಕೋಟಿ ಕನ್ನಡಿಗರನ್ನು ಪ್ರತಿನಿಧಿಸುತ್ತದೆ. ವಿಧಾನಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಅವರನ್ನು ಹೇಗೆ ಬಿಟ್ಟರು ಎಂದು ಕಿಡಿಕಾರಿದರು.
ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿದರು.
ಎನ್‌ಐಎ ತನಿಖೆ ನಡೆಸಿ ರಾಜ್ಯ ಸರ್ಕಾರವನ್ನು ವಿಸರ್ಜಿಸುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಈ ನಡುವೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ನಿಜವೆಂದು ಸಾಬೀತಾದರೆ, ಗಂಭೀರ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಇದಕ್ಕೆ ಪೂರಕವಾಗಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ, ಹುಸೇನ್ ಪಾಸ್ ಅಡಿಯಲ್ಲಿ 25 ಮಂದಿ ವಿಧಾನಸೌಧ ಪ್ರವೇಶಿಸಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ, ಈ ಪ್ರಕರಣದಲ್ಲಿ ಮಾತ್ರವಲ್ಲ, ಎಲ್ಲಿಯಾದರೂ, ಇಂತಹ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.