ಲೋಕಸಭಾ ಚುನಾವಣೆ-೨೦೨೪: ಮತದಾನ ಪ್ರತಿಜ್ಞಾವಿಧಿ ಬೋಧನೆ
ವಿಜಯಪುರ: ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ೨೦೨೩-೨೪ ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮತದಾನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲ ಕ್ರೀಡಾಪಟುಗಳೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು(ಪ್ರಭಾರ) ಕೆ. ಹೊಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೆಡಶ್ಯಾಳ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಧೈವಾಡಿ, ಕ್ರೀಡಾ ಕಾರ್ಯದರ್ಶಿ ಎಸ್. ಎಸ್. ಕೆರೂರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷರಾದ ವಿಶ್ವನಾಥ ಬೆಳೆನ್ನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ಗಂಗಾಧರ ಜೇವೂರ, ಇನ್ನೋರ್ವ ಕ್ರೀಡಾ ಕಾರ್ಯದರ್ಶಿ ನಿಜು ಮೇಲಿನಕೇರಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರಾದ ಜಾವೀದ ಜಮಾದಾರ, ನ್ಯಾಯವಾದಿಗಳಾದ ನಾಗರಾಜ ಲಂಬು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಉಪಸ್ಥಿತರಿದ್ದರು.

