ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಫುಡ್ ಕರ್ನಾಟಕ ಲಿಮಿಟೆಡ್ ವತಿಯಿಂದ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳು ಹಾಗೂ ಈ ಕುರಿತಂತೆ ಚರ್ಚಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮಾ.೨ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ.
ಸದರಿ ಸಭೆಗೆ ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಪ್ರಗತಿಪರ ರೈತರನ್ನು ಆಹ್ವಾನಿಸಲಾಗಿದ್ದು, ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
