ವಿಜಯಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ೨೦೨೪ರ ಮಾರ್ಚ್ ೦೯ರಂದು ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ತಾಲೂಕಾ ಕೇಂದ್ರದ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ರಾಷ್ಟಿçÃಯ ಲೋಕ್-ಅದಾಲತ್‌ನಲ್ಲಿ ರಾಜಿಯಾಗಬಹುದಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ಪಾಲು ವಿಭಾಗ ಕೋರಿ ಸಲ್ಲಿಸಿರುವ ದಾವೆಗಳು, ದೂರವಾಣಿ ಬಾಕಿ ಬಿಲ್ಲು ಪಾವತಿ ಪ್ರಕರಣಗಳು, ನೀರಿನ ಬಿಲ್ಲು ಬಾಕಿ ಪಾವತಿ ಪ್ರಕರಣಗಳು, ಜೀವನಾಂಶ ಕೊರಿ ಸಲ್ಲಿಸಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಳನ್ನು ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು.
ಮಾ.೯ರಂದು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳುವ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಸಂತೋಷ ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
