ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ತಾಲೂಕಾ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಗೋಡೆಕಾರ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಘದ ಗುರಿ ಹಾಗೂ ತತ್ವ ಸಿದ್ಧಾಂತಗಳನ್ನು ಹೇಳಿ ತಾಲೂಕಾ ಅಧ್ಯಕ್ಷ ಅರುಣಗೌಡ ತೇರದಾಳ ಆದೇಶ ಪ್ರತಿ ನೀಡಿದರು.
ತಾಲೂಕಿನಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ರೈತ ಸಂಘದ ಹಿರಿಯ, ಯುವ, ಮಹಿಳಾ, ಕಾರ್ಮಿಕ ಸಂಘಟನೆಯನ್ನು ಮಾಡಿ ಎಲ್ಲಾ ರೈತರನ್ನು ಸಂಘಟನೆಗೆ ಕರೆತಂದು ಸರ್ಕಾರದ ಯೋಜನೆಗಳನ್ನು ತಿಳಿಸುತ್ತಾ, ಹೊಸ ಹೊಸ ತಂತ್ರಜ್ಞಾನಗಳನ್ನು ತಿಳಿಸುತ್ತಾ ಸಮಗ್ರ ಹಾಗೂ ಸಾವಯವ ಕೃಷಿ ಮಾಡುವಂತೆ ಪ್ರೇರೇಪಿಸಬೇಕು ಎಂದಿದ್ದಾರೆ.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ಮುಖಂಡರಾದ ಸಂತೋಷ ಪೂಜಾರಿ, ಶಿವರಾಜ ಕುಮಟಗಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

