ಆಲಮೇಲ: ಮಕ್ಕಳ ಕವನ ಸಂಕಲನ “ಸೀಸದ ಕಡ್ಡಿ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ಮಾರ್ಚ ೫ರಂದು ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಬಳಗಾನೂರ ಗ್ರಾಮದ ಗುರು ಕೇದಾರಲಿಂಗೇಶ್ವರ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಬಳಗಾನೂರ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಚು ಎಸ್. ಕೊಪ್ಪ ವಿರಚಿತ ಸೀಸದ ಕಡ್ಡಿ ಮಕ್ಕಳ ಕವನ ಸಂಕಲನ ಕೃತಿ ಬಂಥನಾಳದ ಮಾಧುರಿ ಪ್ರಕಾಶನ ಪ್ರಕಟಿಸಿರುವ ಕೃತಿ ಲೋಕಾರ್ಪಣೆಗೊಳ್ಳಲಿದೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಹಾಗೂ ಮಕ್ಕಳ ಸಾಹಿತಿ ಸಿಂದಗಿಯ ಹ.ಮ. ಪೂಜಾರ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಕೃತಿ ಪರಿಚಯಿಸಲಿದ್ದಾರೆ. ಗುರು ಕೇದಾರಲಿಂಗೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ ಬಿರಾದಾರ, ಮುಖ್ಯ ಶಿಕ್ಷಕ ಎಂ.ಎಸ್. ಸಾವಳಸಂಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಆನಂದ ಭೂಸನೂರ, ಅವಧೂತ ಬಂಡಗಾರ, ಎಸ್.ಎಚ್. ಬಿರಾದಾರ, ಡಿ.ಕೆ. ಕತ್ನಳ್ಳಿ ಇವರುಗಳ ಉಪಸ್ಥಿತಿಯಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಲೇಖಕ ರಾಚು ಕೊಪ್ಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
