ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವ ಮಾ.೫,೬ ಮತ್ತು ೭ ರಂದು ಅದ್ಧೂರಿಯಾಗಿ ನೆರವೇರಲಿದೆ. ಸಾಮೂಹಿಕ ವಿವಾಹ, ಜಗದ್ಗುರುಗಳ ಅಡ್ಡಪಲ್ಲಕ್ಕಿ, ನಾಟಕೋತ್ಸವ, ಜನಪದ ಕಲಾಮೇಳ, ಯುವಜನೋತ್ಸವ ಹೀಗೆ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಭಕ್ತಾಧಿಗಳು ಭಾಗಿಯಾಗಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಪಟ್ಟಾಧಿಕಾರ ಮಹೋತ್ಸವ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಸಿ.ಎಸ್.ನಾಡಗೌಡರು ಮನವಿ ಮಾಡಿಕೊಂಡರು.
ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪಟ್ಟಾಧಿಕಾರ ಮಹೋತ್ಸವ ಸಮಿತಿಯ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೊಂದು ಅಪರೂಪದ ಕಾರ್ಯಕ್ರಮ. ಅಂದಾಜು ೬೦ ಸಾವಿರ ಜನಕ್ಕೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರತಿ ದಿನ ಅಂದಾಜು ೨೦ ಸಾವಿರ ಜನತೆ ಸೇರುವ ನಿರೀಕ್ಷೆ ಇದೆ. ಎಲ್ಲ ಭಕ್ತಾಧಿಗಳು ತನು, ಮನ, ಧನದಿಂದ ಭಾಗಿಯಾಗುವಂತೆ ಕೋರಿದರು.
ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷರೂ ಮಹೋತ್ಸವ ಸಮಿತಿಯ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಮಾತನಾಡಿ, ಪಟ್ಟಾಧಿಕಾರ ಮಹೋತ್ಸವದಲ್ಲಿ ಭಾಗಿಯಾಗುವ ಅವಕಾಶ ಎಲ್ಲರಿಗೂ ಸಿಗುವದಿಲ್ಲ. ಸಿಕ್ಕಿದ್ದು ನಮ್ಮೆಲ್ಲರ ಭಾಗ್ಯ. ಗ್ರಾಮಸ್ಥರು, ಶ್ರೀ ಮಠದ ಸದ್ಭಕ್ತರು ಮತ್ತು ಮಹೋತ್ಸವದ ವಿವಿಧ ಸಮಿತಿಯ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಶ್ವಿಗೆ ಶ್ರಮಿಸೋಣ ಎಂದರು.
ಸೂಗೂರಿನ ಚನ್ನರುದ್ರಮುನಿ ಶಿವಾಚಾರ್ಯರು ಮಾತನಾಡಿದರು. ಈ ವೇಳೆ ಗಡಿಗಾಂವದ ಶಾಂತಲಿAಗ ಶಿವಾಚಾರ್ಯರು, ಗುಂಡಕನಾಳದ ಗುರುಲಿಂಗ ಶಿವಾಚಾರ್ಯರು, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ, ಕಸಾಪ ನಿಕಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ, ಸಂಗನಗೌಡ ಪಾಟೀಲ, ಗುರನಗೌಡ ಸುಳ್ಳಳ್ಳಿ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
ಡಾ.ಚನ್ನವೀರ ದೇವರ ಪಟ್ಟಾಧಿಕಾರ ಯಶಸ್ವಿಗೊಳಿಸಿ :ಶಾಸಕ ನಾಡಗೌಡ
Related Posts
Add A Comment

