ಚಿಮ್ಮಡ: ಅನಾದಿಕಾಲದಿಂದಲೂ ಪ್ರತಿಯೊಂದು ಧರ್ಮಗಳಲ್ಲಿ ಆಚರಣೆಯಲ್ಲಿರುವ ಜಾಗರಣೆ, ಉಪವಾಸ ವೃತಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ಸಹಾಯಕವಾಗಿವೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.
ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಪ್ರಭುಲಿಂಗೇಶ್ವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಉಪವಾಸದೊಂದಿಗೆ ಪ್ರಕೃತಿದತ್ತವಾಗಿ ಕಾಲಕಾಲಕ್ಕೆ ಲಭಿಸುವ ಹಣ್ಣು, ತರಕಾರಿಗಳನ್ನು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ದೊರೆಯುತ್ತವೆ, ನಿತ್ಯ ಸಮಾಜದಲ್ಲಿ ನಾವು ಉತ್ತಮ ಬದುಕು ಕಂಡುಕೊಳ್ಳಬೇಕಾದರೆ ಸಂಸ್ಕೃತಿ, ಸಂಸ್ಕಾರ, ಸೌಹಾರ್ದತೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕು ಎಂದರು,
ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ರಾಚಯ್ಯಾ ಮಠಪತಿ, ಸುರೇಶ ಅಥಣಿ, ಪ್ರಕಾಶ ಹಳ್ಳೂರ, ಎಲ್ಲಪ್ಪಾ ಅರುಟಗಿ, ಬಸಪ್ಪಾ ಪಾಲಭಾವಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ರೈತರು ಉಪಸ್ಥಿತರಿದ್ದರು.
ಇಲಾಹಿ ಜಮಖಂಡಿಯವರಿಂದ ಹಮ್ಮಿಕೊಳ್ಳಲಾಗಿದ್ದ ದಾಸೋಹ ಮಹಾಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಮಂಗಲಗೊಂಡಿತು
Subscribe to Updates
Get the latest creative news from FooBar about art, design and business.
Related Posts
Add A Comment

