ಪಂಚಮಿತ್ರ ಪೋರ್ಟಲ್ ಮತ್ತು ಪಂಚಮಿತ್ರ ವ್ಯಾಟ್ಸಪ್ ಚಾಟ್ ಲೋಕಾರ್ಪಣೆಗೊಳಿಸಿದ ಜಿ.ಪಂ.ಸಿಇಓ ರಿಷಿ ಆನಂದ
ವಿಜಯಪುರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯುವ ಪಂಚಮಿತ್ರ ಪೋರ್ಟಲ್ ಮತ್ತು ವ್ಯಾಟ್ಸಪ್ ಚಾಟ್‌ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಲೋಕಾರ್ಪಣೆಗೊಳಿಸಿದರು.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, “ಪಂಚಮಿತ್ರ” ಎಂಬ ಒಂದೇ ವೇದಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ.
ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿದ ಪಂಚಮಿತ್ರ ಪೋರ್ಟಲ್ ಹಾಗೂ ವ್ಯಾಟ್ಸಪ್ ಚಾಟ್ ಲೋಕಾರ್ಪಣೆಗೊಳಿಸಿದ್ದು, ಸಾರ್ವಜನಿಕರು ತಮಗೆ ಅವಶ್ಯವಿರುವ ಪಂಚಾಯತಿಗಳ ಮಾಹಿತಿ, ವಿವರ ಪಡೆಯಲು ವಿವಿಧ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್‌ಸೈಟ್ ಮತ್ತು ಪೋರ್ಟಲ್‌ಗಳಿಗೆ ಭೇಟಿ ನೀಡಬೇಕಾಗಿತ್ತು. ಈ ತಂತ್ರಾಂಶದಲ್ಲಿ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು ಒಂದೇ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್‌ಸೈಟ್ ಅಥವಾ ಪೋರ್ಟಲ್‌ಗಳು ಇಲ್ಲದೇ ಇರುವುದರಿಂದ ಸಾರ್ವಜನಿಕರಿಗಾಗುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಈ ತಂತ್ರಾಂಶ ರೂಪಿಸಲಾಗಿದ್ದು, ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರ, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ಪಂಚಮಿತ್ರ ವ್ಯಾಟ್ಸಪ್ ಚಾಟ್ ನಂ. ೮೨೭೭೫೦೬೦೦೦ ಮೂಲಕ ದಾಖಲಿಸಬಹುದಾಗಿದೆ.
ಇನ್ನೂ ಮುಂದೆ ವ್ಯಾಟ್ಸಪ್ ಮೂಲಕ ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‌ಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಆರ್‌ಟಿಐ ದಾಖಲೆಗಳ ವಿವರ, ಗ್ರಾಮ ಪಂಚಾಯತಿಗಳಿಗೆ ಸಂಬAಧಿಸಿದAತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.
ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ
ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ, ಸ್ವಾಧೀನ ಪ್ರಮಾಣಪತ್ರ, ರಸ್ತೆ ಅಗೆಯುವುದಕ್ಕಾಗಿ ಅನುಮತಿ, ಕೈಗಾರಿಕಾ / ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ಒಉಓಖಇಉಂ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿಸುವಿಕೆ, ಹೊಸ/ಅಸ್ತಿತ್ವದಲ್ಲಿರುವ ಓವರ್‌ಗ್ರೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ ೯/೧೧ಎ, ನಮೂನೆ ೧೧ಬಿ, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಈ ಕೆಳಗಿನ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.
ಗ್ರಾಮೀಣ ಜನರಿಗೆ ಸೇವೆಗಳನ್ನು ನೀಡುವ ಪಂಚಮಿತ್ರ ತಂತ್ರಾಂಶ ಮತ್ತು ವಾಟ್ಸಪ್ ಚಾಟ್ ಡಿಜಿಟಲ್ ವೇದಿಕೆ ಮೂಲಕ ಪಡೆಯಲು ಅವಕಾಶ ಕಲ್ಪಿಸಿದ್ದು, ಇದರೊಂದಿಗೆ ಗ್ರಾಮ ಪಂಚಾಯತಿಗೆ ಸಂಬಂಧಿಸಿದ ೧೭ ಸೇವೆಗಳು, ಇತರೆ ಇಲಾಖೆಗಳಿಗೆ ಸಂಬಂಧಿಸಿದ ೭೮ ಸೇವೆಗಳು ಈ ವೇದಿಕೆಯಲ್ಲಿ ದೊರೆಯಲಿವೆ ಎಂದು ಜಿಲ್ಲಾ ಪಂಚಾಯತಿಯ ಪ್ರಕಟಣೆ ತಿಳಿಸಿದೆ.

