ರಾಜ್ಯದ ರಾಷ್ಟ್ರೀಯ ಹೆದ್ದಾರಿ 748A ಉನ್ನತೀಕರಣಕ್ಕೆ ಬಿಡುಗಡೆ | ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆ ಉನ್ನತೀಕರಣ
ನವದೆಹಲಿ: ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂ. ಮಂಜೂರು ಮಾಡಿದೆ.
ಈ ಉಪಕ್ರಮವು ಒಟ್ಟು 92.40 ಕಿಮೀ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್‌ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ.
*ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಹೆದ್ದಾರಿ ಕಾಮಗಾರಿಗೆ ನಿತಿನ್ ಗಡ್ಕರಿ ಚಾಲನೆ*
6,975 ಕೋಟಿ ರೂ. ಮೌಲ್ಯದ 376 ಕಿ.ಮೀ. ಹೆದ್ದಾರಿ ಕಾಮಗಾರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕೇಂದ್ರ ಸರ್ಕಾರ ಈ 8 ಜಿಲ್ಲೆಗಳ 376 ಕಿ.ಮೀ ಉದ್ದದ ರಸ್ತೆಗಳಿಗೆ 6975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.

