ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ವಿವಿಯ ಕುಲಾಧಿಪತಿಗಳಾದ ಡಾ. ಎಂ. ಬಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪೂರಕವಾಗಿ ಹೊಸ ಹೊಸ ಪ್ರಯತ್ನಗಳಿಗೆ ಮುನ್ನುಡಿ ಬರೆಯುತ್ತಿದ್ದು, ಜನಪರ ಸೇವೆಗಳ ಮೂಲಕ ದೇಶಾದ್ಯಂತ ಗಮನ ಸೆಳೆಯುತ್ತಿದೆ.
ಇಂಥ ಚಟುವಟಿಕೆಗಳಿಗೆ ಈಗ ಮತ್ತೋಂದು ಸೇರ್ಪಡೆ ಇದೇ ತಿಂಗಳು 10.04.2024ರಂದು ರವಿವಾರ ಬೆಳಿಗ್ಗೆ 7 ಗಂಟೆಗೆ ಆಯೋಜಿಸಿರುವ ಸ್ವಾಸ್ಥ್ಯ ಸಂತುಲನ ರಂಗೋಲಿ ಮಹೋತ್ಸವ ಕಾರ್ಯಕ್ರಮ. ವೈದ್ಯಕೀಯ ಶಿಕ್ಷಣದ ವಿಷಯದ ಮೇಲೆ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಕಾರ್ಯಕ್ರಮ ಇದಾಗಿದ್ದು, ಇದು ಗಿನ್ನೀಸ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗುವ ನಿಟ್ಟಿನಲ್ಲಿ ಮಹತ್ವ ಹೆಜ್ಜೆಯಾಗಿದೆ.
ಈ ಕಾರ್ಯಕ್ರಮದಲ್ಲಿ 1500ಕ್ಕೂ ಹೆಚ್ಚು ಜನ ವೈದ್ಯಕೀಯ ವಿದ್ಯಾರ್ಥಿಗಳು 50000 ಚದುರ ಅಡಿ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಠ್ಯಕ್ಕೆ ಪೂರಕವಾದ 250 ಚಿತ್ರಗಳನ್ನು ರಂಗೋಲಿ ಮೂಲಕ ಬಿಡಿಸಲಿದ್ದಾರೆ. 40 ಜನ ಮಾರ್ಗದರ್ಶಕರು ಮತ್ತು 20 ಜನ ಮೇಲ್ವಿಚಾರಕರು ಇದರ ಉಸ್ತುವಾರಿ ವಹಿಸಲಿದ್ದಾರೆ. ಇದಕ್ಕಾಗಿ 10 ಟನ್ ರಂಗೋಲಿ ಬಳಕೆಯಾಗುತ್ತಿದೆ. 10×12 ಅಡಿಯ ರಂಗೋಲಿ ಚಿತ್ರಗಳನ್ನು
ಬಿಡಿಸಲಾಗುವುದು.
ವೈದ್ಯಕೀಯ ಶಿಕ್ಷಣದ ಬೋಧನೆ, ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ವಿದ್ಯಾರ್ಥಿಗಳಿಗೆ ಚಿತ್ರಬಿಡಿಸುವ ಕೌಶಲ್ಯಾಭಿವೃದ್ಧಿ ಪಡಿಸುವುದು ಮತ್ತು ಆರೋಗ್ಯದ ಬಗ್ಗೆ ರಂಗೋಲಿಯ ಕಲೆಗೆ ಪ್ರೋತ್ಸಾಹ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಈ ಕಾರ್ಯಕ್ರಮದ ಮೂಲಕ ಬೃಹತ್ ಪ್ರಮಾಣದಲ್ಲಿ ರಂಗೋಲಿ ಬಿಡಿಸುವ ಮೂಲಕ ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಲಾಗುತ್ತಿದೆ. ಅಲ್ಲದೇ, ಇದು ಗಿನ್ನೇಸ್ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ರ್ ನಲ್ಲಿ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಾಗಿದೆ.
ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷರು, ಡೀಮ್ಡ್ ವಿವಿ ಕುಲಾಧಿಪತಿಗಳೂ ಆಗಿರುವ ಶ್ರೀ ಎಂ. ಬಿ.ಪಾಟೀಲ ಅವರು ಮಾ. 10 ರಂದು ರವಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವಿಯ ಎಲ್ಲ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಾ.ಆರ್. ಎಸ್. ಮುಧೋಳ, ಕುಲಪತಿಗಳು, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಡಾ. ಅರವಿಂದ ಪಾಟೀಲ, ಪ್ರಾಚಾರ್ಯರು, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಡಾ.ಸುಮಂಗಲಾ ಪಾಟೀಲ, ಉಪಪ್ರಾಚಾರ್ಯರು, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಡಾ.ದೀಪಕಕುಮಾರ ಚವ್ಹಾಣ, ಸಹ ಪ್ರಾಧ್ಯಾಪಕರು ಮತ್ತು ಐಟಿ ವಿಭಾಗದ ಮುಖ್ಯಸ್ಥರು, ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ, ಡಾ.ನಂದಿನಿ ಮುಚ್ಚಂಡಿ, ಕಾರ್ಯಕ್ರಮ ಸಂಯೋಜಕರು ಮತ್ತು ಬಯೋಕೆಮೆಸ್ಟ್ರಿ ವಿಭಾಗ ಇದ್ದರು.
ಡಾ. ಉದಯಕುಮಾರ ಪಾಟೀಲ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

