ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ.ಡಿ., ಕಪನಿಂಬರಗಿ, ಹಿಂಗಣಿ ಹಾಗೂ ಪಡನೂರ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಆಯ್ಕೆಯಾದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ನೋಟಿಸ್ ಬೋರ್ಡಿಗೆ ಹಾಗೂ ತಾಲೂಕಾ ಪಂಚಾಯತ್ ಇಂಡಿ, ಕಚೇರಿ ಮತ್ತು ನಿಂಬಾಳ ಕೆ.ಡಿ., ಕಪನಿಂಬರಗಿ, ಹಿಂಗಣಿ ಹಾಗೂ ಪಡನೂರ ಗ್ರಾಮ ಪಂಚಾಯತ್ ಕಾರ್ಯಾಲಯದ ನೋಟಿಸ್ ಬೋರ್ಡನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ : ೧೮-೦೩-೨೦೨೪ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಆಕ್ಷೆಪಣೆಗಳನ್ನು ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣ, ವಿಜಯಪುರ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಪಟ್ಟಿ ಪ್ರಕಟ :ಆಕ್ಷೇಪಣೆ ಆಹ್ವಾನ
Related Posts
Add A Comment
