ವಿಜಯಪುರ: ಸಿಂದಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಕ್ಷೇತ್ರವನ್ನು ವಿಭಜಿಸಿ, ಆಲಮೇಲ ತಾಲೂಕಿಗೆ ಪ್ರತ್ಯೇಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚಿಸಲು ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ, ೧೯೬೬ ಕಲಂ ೧೪೫ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರೈತರ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಕೇತ್ರವನ್ನು ವಿಭಜಿಸಿ, ಅಲಮೇಲ ತಾಲ್ಲೂಕಿಗೆ ಹೊಸದಾಗಿ ಪ್ರತ್ಯೇಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚಿಸಲು ಹಾಗೂ ೯೫ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಒಳಪಡಿಸಲು ಉದ್ದೇಶಿಸಲಾಗಿದೆ.
ಉದ್ದೇಶಿತ ಪ್ರಸ್ತಾವನೆಗೆ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ, ೧೯೬೬ರ ಕಲಂ ೦೩ ರನ್ವಯ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಿದ್ದು, ಯಾವುದೇ ಆಕ್ಷೇಪಣೆಗಳು/ ಸಲಹೆಗಳು ಇದ್ದಲ್ಲಿ, ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಅಥವಾ ಈ ಪ್ರಕಟಣೆಯ ೩೦ ದಿವಸದೊಳಗಾಗಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೊಠಡಿ ಸಂಖ್ಯೆ: ೬೧೦.೬ನೇ ಮಹಡಿ, ೩ನೇ ಗೇಟ್. ಸಹಾಕಾರ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರು ೫೬೦೦೦೧ ಇವರಿಗೆ ಸಲ್ಲಿಸುವಂತೆ ಸಿಂದಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಆಲಮೇಲ ತಾಲೂಕಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚನೆಗೆ ಅಧಿಸೂಚನೆ :ಆಕ್ಷೇಪಣೆ ಆಹ್ವಾನ
Related Posts
Add A Comment
