Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»770 ಶಿವಶರಣರಿಗೆ ಗೌರವ :ಎಂಎಲ್ಸಿ ಸುನೀಲಗೌಡ
(ರಾಜ್ಯ ) ಜಿಲ್ಲೆ

770 ಶಿವಶರಣರಿಗೆ ಗೌರವ :ಎಂಎಲ್ಸಿ ಸುನೀಲಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್ಡಿಇ ವತಿಯಿಂದ ರೂ.1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಉದ್ಘಾಟನೆ

ವಿಜಯಪುರ: ನಗರದ ಭಕ್ತಿಕೇಂದ್ರವಾದ 770 ಅಮರಗಣಂಗಳರ ಸ್ಮಾರಕ ಲಿಂಗ ದೇವಾಲಯ ನವೀಕರಣ ಮತ್ತು ಮಂದಿರದಲ್ಲಿರುವ ಎಲ್ಲ ಲಿಂಗಗಳನ್ನು ಪುನರುಜ್ಜೀವನ ಮಾಡುವ ಅವಕಾಶ ನಮ್ಮ ಬಿ.ಎಲ್.ಡಿಇ ಸಂಸ್ಥೆಗೆ ಒದಗಿ ಬಂದಿರುವುದು ಸುದೈವ. ಈ ಮೂಲಕ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಮಹನೀಯರಿಗೆ ಹಾಗೂ 12ನೇ ಶತಮಾನದ 770 ಶಿವಶರಣರಿಗೆ ನಾವು ಅಳಿಲು ಸೇವೆಯ ರೂಪದಲ್ಲಿ ಗೌರವ ಸಲ್ಲಿಸಿದ್ದೇವೆ ಎಂದು ಸಂಸ್ಥೆಯ ನಿರ್ದೇಶಕ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ರೂ. 1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಹಾಗೂ ಪುನರುಜ್ಜೀವನ ಮಾಡಲಾದ ಲಿಂಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ರೂ. 1.51 ಕೋ. ವೆಚ್ಚದಲ್ಲಿ ನಗರದ 770 ಅಮರಗಳಂಗಳರ ಲಿಂಗದ ಗುಡಿ ನವೀಕರಣ ಮತ್ತು ಈ ಹಿಂದೆ ಶೆಲ್ಲಿಕೇರಿ ಶಿಲೆಗಳಿಂದ ತಯಾರಿಸಲಾಗಿದ್ದ ಎಲ್ಲ ಲಿಂಗಗಳನ್ನು ಈಗ ಕೃಷ್ಣ ಶಿಲೆಯಿಂದ ಹೊಸದಾಗಿ ತಯಾರಿಸಿ ಪುನರುಜ್ಜೀವನ ಮಾಡಲಾಗಿದೆ. ಕಳೆದ ವರ್ಷ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಇಲ್ಲಿಗೆ ಭೇಟಿ ನೀಡಿದಾಗ ಈ ಕಟ್ಟಡ ಹಾಗೂ ಲಿಂಗಗಳು ಶಿಥಿಲಗೊಂಡಿದ್ದರಿಂದ ನವೀಕರಣ ಮತ್ತು ಪುನರುಜ್ಜೀವನಕ್ಕೆ ಸೂಚನೆ ನೀಡಿದ್ದರು. ಅವರ ಆಶಯದಂತೆ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ ಇಂದು ಶುಕ್ರವಾರ ಮಹಾಶಿವರಾತ್ರಿಯ ಶುಭದಿನದಂದು ಭಕ್ತರಿಗಾಗಿ ಉದ್ಘಾಟಿಸಲಾಗಿದೆ ಎಂದು ಅವರು ತಿಳಿಸಿದರು.
12ನೇ ಶತಮಾನದಲ್ಲಿ ನಾನಾ ಜಾತಿ ಮತ್ತು ಸಮುದಾಯದ 770 ಜನ ಶಿವಶರಣರು ಬಸವೇಶ್ವರರ ಜೊತೆಗೂಡಿ ಅನುಭವ ಮಂಟಪದ ಮೂಲಕ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದರು. ಆದರೆ ಅವರಲ್ಲಿ ಬಸವೇಶ್ವರು, ಅಕ್ಕಮಹಾದೇವಿ ಸೇರಿದಂತೆ ಕೆಲವರ ಹೆಸರುಗಳನ್ನು ಹೊರತು ಪಡಿಸಿದರೆ ಆದಯ್ಯ, ನನ್ನಯ್ಯ, ಸುಜ್ಞಾನಿ ದೇವ, ಕಲಕೇತ ಬೊಮ್ಮಯ್ಯ, ಏಕಾಂತದ ರಾಮಯ್ಯ ಸೇರಿದಂತೆ 770 ಅಮರಗಣಂಗಳರ ಹೆಸರುಗಳು ಚಿರಪರಿಚಿತವಾಗಿಲ್ಲ. ಈ ಎಲ್ಲ ಶರಣರ ಹೆಸರನ್ನು ಚಿರಸ್ಥಾಯಿಯಾಗಿಸಲು 1960ರಲ್ಲಿ ಬಂಥನಾಳ ಶಿವಯೋಗಿಗಳು ಇಲ್ಲಿ 770 ಅಮರಗಣಂಗಳರ ಲಿಂಗ ಪ್ರತಿಷ್ಠಾಪಿಸಿದ್ದರು. ಅಲ್ಲದೇ, ಅಂದು ಪ್ರತಿಯೊಂದು ಲಿಂಗ ಪ್ರತಿಷ್ಠಾಪನೆಯ ಜವಾಬ್ದಾರಿಯನ್ನು ತಲಾ ಓರ್ವ ದಂಪತಿಗೆ ನೀಡಿದ್ದರು. ಈ ದೇವಸ್ಥಾನ ಶಿಥಿಲಗೊಂಡ ಹಿನ್ನೆಲೆಯಲ್ಲಿ ಈಗ ಅದನ್ನು ನವೀಕರಣ ಮತ್ತು ಪುನರುಜ್ಜೀವನ ಮಾಡಲಾಗಿದೆ ಎಂದು ಸುನೀಲಗೌಡ ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಶರಣಬಸವ ವಾರದ, ಡಾ. ಮಹಾಂತೇಶ ಬಿರಾದಾರ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಸಂಗಯ್ಯ ಹಿರೇಮಠ, ಎಂ. ಎಂ. ಸಜ್ಜನ, ಸಿದ್ರಾಮಪ್ಪ ಉಪ್ಪಿನ, ನೀಲಾ ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಶಾಸಕ ಸುನೀಲಗೌಡ ಪಾಟೀಲ ಅವರು ತಮ್ಮ ಪತ್ನಿ ರೇಣುಕಾ ಅವರ ಜೊತೆ ಲಿಂಗದ ಗುಡಿಯಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಅರ್ಚಕರಿಂದ ಆಶೀರ್ವಾದ ಪಡೆದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.