ಸಿಂದಗಿ: ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನ ಜಯಂತಿ ಮಹಾಶಿವರಾತ್ರಿ ಗೊಂದು ವಿಶೇಷ ಅರ್ಥವಿದೆ ಎಂದು ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಪವಿತ್ರಾಜಿ ಹೇಳಿದರು.
ನಗರದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡ 88ನೇ ತ್ರಿಮೂರ್ತಿ ಶಿವಜಯಂತಿ ಹಾಗೂ ಮಹಾಶಿವರಾತ್ರಿಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಶಿವನೆಂದರೆ ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯನಾದ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮನಗೂಳಿ ಕಾಲೇಜಿನ ಪ್ರಾಚಾರ್ಯ ಡಾ ಬಿ ಜಿ ಪಾಟೀಲ, ಸರಳತೆ, ಪ್ರಾಮಾಣಿಕತೆಯಿಂದ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ ಎಂದರು.
ಈ ಸಂದರ್ಭದಲ್ಲಿ ಬ್ರಹ್ಮಾಕುಮಾರ ಕೆಂಪೇಗೌಡ, ವಿಜಯಕುಮಾರ ತೇಲಿ, ತಾನಾಜಿ ಕನಸೆ, ಎಸ್ ಎಸ್ ಬುಳ್ಳಾ, ಎಸ್ ವೈ ಬಿರಾದಾರ, ಉಪನ್ಯಾಸಕ ಸಿದ್ದಲಿಂಗ ಕಿಣಗಿ, ಶಿಕ್ಷಕ ಸಿದ್ದಲಿಂಗ ಚೌದರಿ, ಸೀಮಾ ಉಡಚಾಣ, ಕೆ ಎಸ್ ಪತ್ತಾರ, ಎಸ್ ಎಸ್ ಪಾಟೀಲ, ಪರಿಮಳಾ ಪಾಟೀಲ ಐಶ್ವರ್ಯ, ಮೇಘಾ,ಪ್ರೇಮಾ ನಾಯಕ, ಶಿವನಗೌಡ ಬಿರಾದಾರ ಸೇರಿದಂತೆ ಮತ್ತಿತರಿದ್ದರು.
ಕುಮಾರಿ ಕಾವ್ಯ ನಾಯಕ ಮತ್ತು ಡಾ ಪ್ರಕಾಶ ಪ್ರಾರ್ಥಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

