ಇಂಡಿ: ಸೊಳ್ಳೆಗಳಿಂದ ಮಲೇರಿಯಾ ರೋಗ ಹರಡುತ್ತಿದ್ದು, ಸೊಳ್ಳೆಗಳನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿಗಳಾದ ಅರ್ಚನಾ ಕುಲಕರ್ಣಿ ಹೇಳಿದರು.
ಅವರು ಪಟ್ಟಣದ ಏಂಜೆಲ್ಸ್ ಆಂಗ್ಲ ಮಾಧ್ಯಮ ಹಾಗೂ ಅನುದಾನಿತ ಕ್ರೈಸ್ತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆಯ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೇ ಇದ್ದರೆ ಸೊಳ್ಳೆಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಎಲ್ಲರೂ ಸ್ವಚ್ಚತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.
ಶಿಕ್ಷಣ ಸಂಯೋಜಕರಾದ ಮಹೇಶ ಡೇoಬ್ರೆ ಮಾತನಾಡಿದರು.
ಆರ್ ಡಿ ಈ ಸಂಸ್ಥೆಯ ಅಧ್ಯಕ್ಷೆ ಡಿ ಶಿರೋಮಣಿ ಅಧ್ಯಕ್ಷತೆ ವಹಿಸಿದ್ದರು.ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್ ಎಸ್ ಪತ್ತಾರ,ಏಂಜೆಲ್ಸ್ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ನಾಯ್ಕೋಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಿಕ್ಷಕ ಸಂತೋಷ ಬಂಡೆ ಕಾರ್ಯಕ್ರಮ ನಿರ್ವಹಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

