Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸನಬಾಗೇವಾಡಿಯಲ್ಲಿ ವಚನ ವಿವಿ ಸ್ಥಾಪನೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಬಸನಬಾಗೇವಾಡಿಯಲ್ಲಿ ವಚನ ವಿವಿ ಸ್ಥಾಪನೆಗೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಚನ ವಿಶ್ವವಿದ್ಯಾಲಯ ಸ್ಥಾಪನೆ ಘೋಷಣೆ: ರಾಷ್ಟ್ರೀಯ ಬಸವ ಸೈನ್ಯ ಹರ್ಷ

ಬಸವನಬಾಗೇವಾಡಿ: 12ನೇ ಶತಮಾನದಲ್ಲಿ ವಚನದ ಮೂಲಕ ಕ್ರಾಂತಿಯನ್ನು ಮಾಡಿದ ಮಹಾ ಮಾನವತವಾದಿ ವಿಶ್ವಗುರು ಬಸವಣ್ಣನವರ ಸಮಕಾಲಿನ ಶರಣರ ವಚನಗಳ ಅಧ್ಯಯನಕ್ಕಾಗಿ ವಚನ ವಿಶ್ವವಿದ್ಯಾಲಯವನ್ನು ಮುಂದಿನ ವರ್ಷ ಸರ್ಕಾರ ಆರಂಭಿಸುವುದಾಗಿ ಘೋಷಣೆ ಸಿಎಂ ಘೋಷಣೆ ಮಾಡಿರುವುದನ್ನು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸ್ವಾಗತಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿನಂದನಾ ಸಮಾರಂಭದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ವಿಷಯವಾಗಿದೆ.ಈಚೆಗೆ ಸರ್ಕಾರ ಬಸವಣ್ಣನವರನ್ನು ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡಿರುವದು ಬಸವನಾಡಿನ ಜನರಿಗೆ ಸಂತಸ ತಂದಿದೆ. ಈಗಾಗಲೇ ರಾಜ್ಯ ಸರ್ಕಾರವು ಬಸವಣ್ಣನವರ ಕರ್ಮಭೂಮಿ ಬಸವ ಕಲ್ಯಾಣದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಮಾಡುತ್ತಿದೆ. ಕೂಡಲಸಂಗಮದಲ್ಲಿ ವಚನ ಅಧ್ಯಯನ ಪೀಠ ಸೇರಿದಂತೆ ಬಸವಣ್ಣನವರ ಸಮಕಾಲಿನ ಶರಣರ ಸ್ಮಾರಕಗಳು ನಿರ್ಮಾಣಗೊಂಡಿದ್ದು ಸಂತೋಷದ ವಿಷಯವಾಗಿದೆ. ರಾಜ್ಯ ಸರ್ಕಾರ ಬಜೆಟಿನಲ್ಲಿ ಬಸವ ಜನ್ಮಸ್ಥಳ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಘೋಷಣೆ ಮಾಡಿರುವದು ಸಹ ಬಸವ ನಾಡಿನ ಜನತೆಯಲ್ಲಿ ಹರ್ಷ ಉಂಟು ಮಾಡಿದೆ. ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ, ಐಕ್ಯಸ್ಥಳ ಕೂಡಲಸಂಗಮಕ್ಕೆ ಕೊಟ್ಟ ಆದ್ಯತೆಯನ್ನು ಬಸವ ಜನ್ಮ ಸ್ಥಳಕ್ಕೆ ಸರ್ಕಾರ ನೀಡಬೇಕು. ವಚನ ವಿಶ್ವವಿದ್ಯಾಲಯವನ್ನು ಬಸವನಬಾಗೇವಾಡಿಯಲ್ಲಿ ಸ್ಥಾಪನೆ ಮಾಡಬೇಕೆಂದು ಈ ಮೂಲಕ ಸರ್ಕಾರಕ್ಕೆ ಆಗ್ರಹಿಸಲಾಗುವದು ಎಂದರು.
ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯಲ್ಲಿ ವಚನ ವಿವಿ ಸ್ಥಾಪನೆ ಮಾಡಿದರೆ ಬಸವಜನ್ಮ ಸ್ಥಳವು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪೂರಕವಾಗುತ್ತದೆ. ಈ ಪ್ರದೇಶ ಶೈಕ್ಷಣಿಕವಾಗಿ ಬಹಳಷ್ಟು ಹಿಂದುಳಿದಿದ್ದು ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದರ ಮೂಲಕ ನಮ್ಮ ಬಸವ ನಾಡಿನಲ್ಲಿ ಶೈಕ್ಷಣಿಕ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು. ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿದ ವಚನ ಗುಮ್ಮಟ ಫ.ಗು. ಹಳಕಟ್ಟಿ ಅವರು ವಿಜಯಪಯರ ಜಿಲ್ಲೆಯವರು. ಈ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದರ ಮೂಲಕ ಫ.ಗು. ಹಳಕಟ್ಟಿ ಅವರಿಗೂ ಕೂಡ ಸರ್ಕಾರ ಗೌರವ ಸಲ್ಲಿಸಿದ ಹಾಗೆ ಆಗುತ್ತದೆ ಎಂದ ಅವರು, ವಚನ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿ ವಚನಗಳಲ್ಲಿ ಬರುವ ಕೃಷಿ ಸೇರಿದಂತೆ ಪ್ರತಿಯೊಂದು ಕಾಯಕಗಳಿಗಾಗಿ ಆದ್ಯತೆಯನ್ನು ನೀಡಬೇಕು. ವಿಶ್ವವಿದ್ಯಾಲಯದ ಆವರಣದಲ್ಲಿ ಎಲ್ಲ ಪ್ರಕಾರದ ಗಿಡ ಮರ ಬಳ್ಳಿಗಳು ಮತ್ತು ಔಷಧೀಯ ಸಸ್ಯಗಳು, ಪುಟ್ಟ ಅರಣ್ಯ ಮತ್ತು ಭವ್ಯವಾದ ಉದ್ಯಾನವನವನ್ನು ಸ್ಥಾಪಿಸಬೇಕು. ಉದ್ಯಾನವನದಲ್ಲಿ ದೇಶದಲ್ಲಿ ಅತಿ ಎತ್ತರದ ವಿಶ್ವಗುರು ಬಸವಣ್ಣನವರ ಪುತ್ಥಳಿ ಸ್ಥಾಪನೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಚಾಲಕ ಶ್ರೀಕಾಂತ ಕೊಟ್ರಶೆಟ್ಟಿ, ಮನ್ನನ ಶಾಬಾದಿ, ಪ್ರಶಾಂತ ಮುಂಜಾನೆ, ಸುನಿಲ ಚಿಕ್ಕೊಂಡ, ಮಹಾಂತೇಶ ಕೆರೂಟಗಿ, ಮಹಾಂತೇಶ ಹೆಬ್ಬಾಳ, ಸಂಗಮೇಶ ಬಿದರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.