ವಿಜಯಪುರ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್‌ನ ದರದ ಮೇಲಿನ ರೂ. ೧೦೦ ಕಡಿಮೆ ಮಾಡಿದ್ದಾರೆ. ಇದನ್ನು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸ್ವಪ್ನಾ ಕಣಮುಚನಾಳ ಸ್ವಾಗತಿಸಿದ್ದಾರೆ.
ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿದ ಅವರು, ಮೋದಿಜಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಉಜ್ವಲ ಯೋಜನೆಯಡಿಯ ಎಲ್‌ಪಿಜಿ ಸಿಲಿಂqರ್‌ನ ಸಬ್ಸಿಡಿ ದರವನ್ನು ೨೦೦ರೂ ರಿಂದ ೩೦೦ರೂ ಹೆಚ್ಚಿಸಿದೆ. ಇದು ದೇಶದಾದ್ಯಂತ ೧೦ ಕೋಟಿಗೂ ಹೆಚ್ಚು ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ ಹಾಗೂ ಮೋದಿಜಿ ಕ್ರಮಕ್ಕಾಗಿ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಅಡುಗೆ ಅನಿಲ ಸಿಲಿಂಡರ್ ಹೆಚ್ಚು ಕೈಗೆಟಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಸುಲಭವಾಗಿ ಬದುಕುವ ಅವಕಾಶವನ್ನು ಖಾತ್ರಿಪಡಿಸುತ್ತದೆ. ಇದು ಬಿಜೆಪಿಯ ಬದ್ಧತೆಯನ್ನು ಪ್ರತಿಫಲಿಸುವಂತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕೇಂದ್ರದಿಂದ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ಹೆಚ್ಚಳ :ಸ್ವಪ್ನಾ ಸ್ವಾಗತ
Related Posts
Add A Comment

