ಮುದ್ದೇಬಿಹಾಳ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ ವಸತಿ ಗೃಹಗಳ ಆವರಣದಲ್ಲಿ ಮಾ.೧೧ ರ ಬೆಳಿಗ್ಗೆ ೧೦:೩೦ ಕ್ಕೆ ೭೫ ವಸಂತಗಳನ್ನು ಪೂರೈಸಿದ ಸಂಘದ ಸದಸ್ಯರಿಗೆ ಗೌರವಾರ್ಪಣೆ ಹಾಗೂ ನೂತನ ಸದಸ್ಯರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡರು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಎಂ.ವ್ಹಿ.ಮಾಟಲದಿನ್ನಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಸ್ಟೇಟ್ ಬ್ಯಾಂಕ್ ನ ವ್ಯವಸ್ಥಾಪಕ ದೀಪಕ ವಟ್ಟ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

