ವಿಜಯಪುರ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮಾ.೧೧ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ ೧೧ ರಂದು ಬೆಳಿಗ್ಗೆ ೮-೪೫ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ ೧೧-೪೫ಕ್ಕೆ ವಿಜಯಪುರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‌ಗೆ ಆಗಮಿಸಿ ಮಧ್ಯಾಹ್ನ ೧೨-೧೫ಕ್ಕೆ ವಿವಿಯ ೧೫ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
