ಬಸವನಬಾಗೇವಾಡಿ: ಬಸವ ಜನ್ಮ ಬಸವನಬಾಗೇವಾಡಿಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಬಜೆಟ್ ನಲ್ಲಿ ಬಸವನಬಾಗೇವಾಡಿಗೆ ಪ್ರತ್ಯೇಕ ಪ್ರಾಧಿಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಬಸವೇಶ್ವರ ಸೇವಾ ಸಮಿತಿ ಪದಾಧಿಕಾರಿಗಳು ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಜವಳಿ ಕಬ್ಬು ಅಭಿವೃದ್ದಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವಗುರು ಬಸವಣ್ಣನವರ ಬೆಳ್ಳಿ ಮೂರ್ತಿಯನ್ನು ಕೊಡುವ ಮೂಲಕ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮೇ.10 ರಂದು ಬಸವ ಜಯಂತಿ ಕಾರ್ಯಕ್ರಮಕ್ಕೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಆಗಮಿಸಬೇಕೆಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಸಂದರ್ಭದಲ್ಲಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ,ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಅನಿಲ ಅಗರವಾಲ, ಸಂಗಮೇಶ ಓಲೇಕಾರ, ಸಂಗಣ್ಣ ಕಲ್ಲೂರ, ಶೇಖರ ಗೊಳಸಂಗಿ, ಬಸವರಾಜ ಕೋಟಿ, ಬಸವರಾಜ ಹಾರಿವಾಳ, ರವಿ ರಾಠೋಡ, ಮಹಾಂತೇಶ ಆದಿಗೊಂಡ, ಸುಭಾಷ ಚಿಕ್ಕೊಂಡ, ಬಸವರಾಜ ಗೊಳಸಂಗಿ, ಸಂಕನಗೌಡ ಪಾಟೀಲ, ಶೇಖರಗೌಡ ಪಾಟೀಲ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

