ವಿಜಯಪುರ: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮಾ.14 ರಂದು ಗುರುವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಆಸ್ಪತ್ರೆಯ ಮೂತ್ರಜನಕಾಂಗ ರೋಗ ಮತ್ತು ಶಸ್ತ್ರಚಿಕಿತ್ಸಾ ವಿಭಾಗ ಹಾಗೂ ಮೂತ್ರಪಿಂಡ ಚಿಕಿತ್ಸಾ ವಿಭಾಗದ ವತಿಯಿಂತ ಈ ಶಿಬಿರ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮೂತ್ರಪಿಂಡ ಖಾಯಿಲೆಯಿಂದ ನರಳುವವರು, ಮೂತ್ರ ವಿಸರ್ಜನೆ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಕಿಡ್ನಿ ಸ್ಟೋನ್ಗಳಿಂದ ತೊಂದರೆ ಅನುಭವಿಸುತ್ತಿರುವವರು ಈ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.
ಅಲ್ಲದೇ, ಆಸ್ಪತ್ರೆಯಲ್ಲಿ ಉಚಿತವಾಗಿ ವೈದ್ಯರ ಸಂದರ್ಶನ, ಸಕ್ಕರೆ (ಶುಗರ) ಖಾಯಿಲೆ ಪರೀಕ್ಷೆ, ಸಿರಮ್ ಕ್ರಿಯಾಟೀನ್ ಪರೀಕ್ಷೆ ಮತ್ತು ರಕ್ತದೊತ್ತಡವನ್ನು ಹಾಗೂ ಶೇ. 50 ರಿಯಾಯಿತಿ ದರದಲ್ಲಿ ಉದರ ಸ್ಕ್ಯಾನಿಂಗ್(USG), ಎಕ್ಸ್ರೇ (X-RAY) ಸಿಬಿಸಿ(CBC) ಮಾಡಲಾಗುವುದು ಎಂದು ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ನೊಂದಣಿಗಾಗಿ ಮೊಬೈಲ್ ನಂ. 8951178777, 9964288930 ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
