ವಿಜಯಪುರ: ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಸಬಲರಾಗುತ್ತಿದ್ದಾರೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಎಂ. ಬೀಡಕರ ಹೇಳಿದ್ದಾರೆ.
ತಿಕೋಟಾ ಪಟ್ಟಣದ ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನಲ್ಲಿ ಇಂದು ಸೋಮವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಪೋಷಕರೂ ಕೂಡ ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಯುವತಿಯರೂ ಕೂಡ ತಾವು ಎಲ್ಲ ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಬಹುದು ಎಂದು ಅರ್ಥೈಸಿಕೊಂಡು ಈಗ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಅವರಿಗೆ ಆಸಕ್ತವಾಗಿರುವ ವಿಷಯಗಳಲ್ಲಿ ಅಧ್ಯಯನ, ಸಾಧನೆ ಮಾಡಲು ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.
ಇದೇ ವೇಳೆ ಅವರು ನಾನಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಮತ್ತು ಮಹಿಳಾ ಅಧ್ಯಾಪರಕರಿಗೆ ಸ್ಮರಣ ಸಂಚಿಕೆ ನೀಡಿ ಗೌರವಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕಿ ಬಸಲಿಂಗಮ್ಮ ಹಯ್ಯಾಳ ವಿಶ್ವ ಮಹಿಳಾ ದಿನಾಚರಣೆಯ ವಿಷಯದ ಕುರಿತು ವಿವರಿಸಿದರು,
ಈ ಸಂದರ್ಭದಲ್ಲಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಆಕಾಶ ಜಾಧವ, ಕಾರ್ಯಕ್ರಮ ಸಂಯೋಜಕಿ ಸಿದ್ದಮ್ಮ ನಾವದಗಿ ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರಿಯಾ ಪಾಟೀಲ ಪ್ರಾರ್ಥಿಸಿದರು. ಉಪನ್ಯಾಸಕ ನವನಾಥ ಅಜೂರ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಸಿದ್ದಮ್ಮ ನಾವದಗಿ ಪರಿಚಯಿಸಿದರು.
ವಿದ್ಯಾರ್ಥಿನಿ ಸಂಜನಾ ಕಪಟಕರ ವಂದಿಸಿದರು. ವಿದ್ಯಾರ್ಥಿನಿಯರಾದ ಪ್ರಗತಿ ಕನಮಡಿ ಮತ್ತು ಐಶ್ವರ್ಯ ಮಂಗಣ್ಣವರ ನಿರೂಪಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

