ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧರಾಮೇಶ್ವರ ಪಾದಯಾತ್ರಾ ಕಮೀಟಿ-೨೦೨೪ ವತಿಯಿಂದ ಮಾ.೨೪ ರಂದು ರಾತ್ರಿ ೮ ಗಂಟೆಗೆ ಸಿದ್ದೇಶ್ವರ ಉತ್ಸವ ಮೂರ್ತಿ ಮತ್ತು ಕಂಬಿ ಜೊತೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀಶೈಲಕ್ಕೆ ಪಾದಯಾತ್ರೆ ೨೧ನೇ ವರ್ಷದ ಪಾದಯಾತ್ರೆ ಆರಂಭಗೊಳ್ಳಲಿದೆ.
ನಿರಂತರ ೧೫ ದಿನಗಳ ಕಾಲ ನಡೆಯುವ ಪಾದಯಾತ್ರೆ ಏ.೬ ರಂದು ಶ್ರೀಶೈಲ ತಲುಪಲಿದೆ. ಅಂದು ಸಂಜೆ ೪ ಗಂಟೆಗೆ ಅಡಕೇಶ್ವರ ದೇವಸ್ಥಾನದಿಂದ ಶ್ರೀಶೈಲ ಮಲ್ಲಯ್ಯನ ಸನ್ನಿಧಿವರೆಗೆ ಕಂಬಿ, ನಂದಿಕೋಲ ಹಾಗೂ ಮುತೈದೆಯರಿಂದ ೧೦೮ ಕುಂಭ ಮೆರವಣಿಗೆ ಜರುಗುವುದು.
ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿಚಾರ್ಯರು ಕುಂಬಮೇಳ ಮೆರವಣಿಗೆ, ಸಗರ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು ಚಾಲನೆ ನೀಡಲಿದ್ದು, ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಅರ್ಚಕ ಈರಯ್ಯ ಹಿರೇಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಪಾಟೀಲ ಚಿಮ್ಮಲಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
