Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಜ್ಲಾನ್ ₹೩೦ಸಾವಿರ ಕೋಟಿ, ರೆನೈಸಾನ್ಸ್ ₹೬ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ
(ರಾಜ್ಯ ) ಜಿಲ್ಲೆ

ಸುಜ್ಲಾನ್ ₹೩೦ಸಾವಿರ ಕೋಟಿ, ರೆನೈಸಾನ್ಸ್ ₹೬ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತವರು ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಸಚಿವ ಎಂ ಬಿ ಪಾಟೀಲ ದಾಪುಗಾಲು

ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್ ಮತ್ತು ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಇಲ್ಲಿ ಮಾತು ನಡೆಸಿದರು.
ಸುಜ್ಲಾನ್ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.
ಬಳಿಕ ಮಾತನಾಡಿದ ಸಚಿವರು, ʻಸುಜ್ಲಾನ್ ಕಂಪನಿಯು ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ ೧೬೦ ಮೀಟರ್ ಎತ್ತರದ ಕಂಬಗಳು ಮತ್ತು ೭೦ ಮೀಟರ್ ಉದ್ದದ ಬೃಹತ್ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ ೩೦ ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲು ತೀರ್ಮಾನಿಸಿದ್ದು, ೧೦೦ ಎಕರೆ ಜಮೀನನ್ನು ಕೇಳಿದೆ. ಇದು ವಿಜಯಪುರ ಜಿಲ್ಲೆಗೆ ಹರಿದು ಬರಲಿರುವ ಬೃಹತ್ ಹೂಡಿಕೆಯಾಗಲಿದೆʼ ಎಂದರು.
ಈಗಾಗಲೇ ನಡೆಸಿರುವ ಅಧ್ಯಯನಗಳ ಪ್ರಕಾರ ಇಡೀ ದೇಶದಲ್ಲಿ ವಿಜಯಪುರ, ಆಂಧ್ರಪ್ರದೇಶದ ಅನಂತಪುರ ಮತ್ತು ರಾಜಾಸ್ಥಾನದ ಜೈಸಲ್ಮೇರ್ ಮಾತ್ರ ಪವನ ವಿದ್ಯುತ್ ಉತ್ಪಾದನೆಗೆ ಅತ್ಯಂತ ಪ್ರಶಸ್ತ ತಾಣಗಳೆಂದು ಗೊತ್ತಾಗಿದೆ. ಅನಂತಪುರ ಮತ್ತು ಜೈಸಲ್ಮೇರ್ ಗಳಲ್ಲಿ ಸುಜ್ಲಾನ್ ಕಂಪನಿಯು ಈಗಾಗಲೇ ಕ್ರಮವಾಗಿ ೨,೦೦೦ ಮತ್ತು ೩,೦೦೦ ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯದ ಪವನ ವಿದ್ಯುತ್ ಘಟಕಗಳನ್ನು ಹೊಂದಿದೆ. ವಿಜಯಪುರದಲ್ಲಿ ಕಂಪನಿಯು ೫,೦೦೦ ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ ೨ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕವಾಗಿರಲಿದೆ ಎಂದು ಅವರು ತಿಳಿಸಿದರು.
ಸುಜ್ಲಾನ್ ಕಂಪನಿಯು ಇಲ್ಲಿ ತಯಾರಿಸಲಿರುವ ಕಂಬ ಮತ್ತು ಬ್ಲೇಡುಗಳನ್ನು ಸ್ಥಳೀಯವಾಗಿಯೇ ಬಳಸಲಿದೆ. ಕಂಪನಿಗೆ ಅಗತ್ಯವಿರುವ ೧೦೦ ಎಕರೆ ಜಮೀನನ್ನು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೊಡಲು ಏನೂ ಸಮಸ್ಯೆ ಇಲ್ಲ. ಅಕಸ್ಮಾತ್ ಕಂಪನಿಯು ಜಿಲ್ಲೆಯ ಬೇರೆಡೆಗಳಲ್ಲಿ ತನಗೆ ಅಗತ್ಯವಿರುವ ಸೂಕ್ತ ಭೂಮಿ ಲಭ್ಯವಿದೆ ಎಂದು ಭಾವಿಸಿದರೆ, ಅಷ್ಟು ಪ್ರಮಾಣದ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಕೊಡಲಾಗುವುದು. ಒಟ್ಟಿನಲ್ಲಿ ಈ ಕಂಪನಿಯು ವಿಜಯಪುರಕ್ಕೆ ಬರಬೇಕು ಎನ್ನುವುದು ಸರಕಾರದ ಗುರಿಯಾಗಿದ್ದು, ಇದಕ್ಕಾಗಿ ʻಬಿಯಾಂಡ್ ಬೆಂಗಳೂರುʼ ಉಪಕ್ರಮದಡಿ ಇರುವ ಸೌಲಭ್ಯ, ಪ್ರೋತ್ಸಾಹಗಳನ್ನೆಲ್ಲ ಕೊಡಲಾಗುವುದು. ಇದಕ್ಕೆ ಕಂಪನಿಯ ಸಿಇಒ ಒಪ್ಪಿಕೊಂಡಿದ್ದು, ಸದ್ಯದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಅಂತಿಮವಾಗಿ ಒಡಂಬಡಿಕೆಗೆ ಸಹಿ ಹಾಕಲಾಗುವುದು ಎಂದು ಅವರು ಮಾಹಿತಿ ನೀಡಿದರು.
(ಫೋಟೋ ಲಗತ್ತಿಸಿದೆ)
ರೆನೈಸಾನ್ಸ್ ಕಂಪನಿಯಿAದ ೬,೦೦೦ ಸಾವಿರ ಕೋಟಿ ರೂ. ಹೂಡಿಕೆ
ಇದಲ್ಲದೆ, ಸೌರ ಫಲಕಗಳ (ಸೋಲಾರ್ ಪ್ಯಾನೆಲ್ಸ್) ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು ೬,೦೦೦ ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದೆ. ಈ ಸಂಬAಧ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಅವರೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದೆ ಎಂದು ಸಚಿವ ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಕಂಪನಿ ಕೂಡ ತನಗೆ ೧೦೦ ಎಕರೆ ಜಮೀನು, ೮೦ ಮೆಗಾವ್ಯಾಟ್ ವಿದ್ಯುತ್ ಮತ್ತು ಪ್ರತಿನಿತ್ಯ ೧೦ ಎಂಎಲ್‌ಡಿ ನೀರಿನ ಅಗತ್ಯವಿದೆ ಎಂದು ತಿಳಿಸಿದೆ. ಜಮೀನು ಮತ್ತು ವಿದ್ಯುತ್ತಿಗೆ ಜಿಲ್ಲೆಯಲ್ಲಿ ಸಮಸ್ಯೆಯೇನೂ ಇಲ್ಲ. ಆಲಮಟ್ಟಿ ಅಣೆಕಟ್ಟೆಯಿಂದ ಕಂಪನಿಗೆ ಅಗತ್ಯವಿರುವಷ್ಟು ನೀರನ್ನೂ ಕೊಡಬಹುದು. ಕಂಪನಿಯು ಆರಂಭದಲ್ಲಿ ೨,೫೦೦ ಕೋಟಿ ರೂ. ಹಣ ಹೂಡಲಿದ್ದು, ೫,೦೦೦ ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್ ಗ್ರೋತ್ & ವೇಫರಿಂಗ್ ಯೂನಿಟ್) ಆರಂಭಿಸಲಿದೆ. ೨೦೨೫ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲು ಉದ್ದೇಶಿಸಲಿದೆ. ಇದರಿಂದ ೧ ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದರು.
ರೆನೈಸಾನ್ಸ್ ಕಂಪನಿಯು ೨೦೩೦ರ ಹೊತ್ತಿಗೆ ತನ್ನ ಘಟಕವನ್ನು ೨೦ ಸಾವಿರ ಮೆಗಾವ್ಯಾಟ್ ಮಟ್ಟಕ್ಕೆ ಕೊಂಡೊಯ್ಯುವ ನೀಲನಕಾಶೆಯನ್ನು ಹೊಂದಿದೆ. ಆಗ ೩,೦೦೦ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ. ಕಂಪನಿಯು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಿದ್ದು, ಅಂತಿಮವಾಗಿ ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ ಎಂದು ಸಚಿವರು ಹೇಳಿದರು.
ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.