Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ಸಿನಿಂದ ಪಠ್ಯಪುಸ್ತಕ ರಾಜಕೀಕರಣ :ಶಹಾಪೂರ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ಸಿನಿಂದ ಪಠ್ಯಪುಸ್ತಕ ರಾಜಕೀಕರಣ :ಶಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಜ್ಯ ಸರ್ಕಾರ ಪಠ್ಯಪುಸ್ತಕವನ್ನು ರಾಜಕೀಯಗೊಳಿಸುತ್ತಿರುವುದು ದುರಂತ, ಪಠ್ಯ ಪುಸ್ತಕ ವಿಚಾರದಲ್ಲಿ ಶಿಕ್ಷಣ ಸಚಿವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಗಂಭಿರವಾಗಿ ಆರೋಪಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ರಚನೆ ಒಂದು ಸ್ವಾಯುತ್ತ ಸಂಸ್ಥೆ ಅಂದರೆ ಡಿ.ಎಸ್.ಇ.ಆ.ರ್.ಟಿ.ಯಿಂದ ಆಗಬೇಕು, ಸಾರ್ವಜನಿಕ ಚರ್ಚೆಗೆ ಒಳಪಡಬೇಕು, ಆದರೆ ಈಗಿನ ಸರ್ಕಾರ ಮಕ್ಕಳ ಓದಿನಲ್ಲಿಯೂ ರಾಜಕೀಯ ಬೆರೆಸಲು ಹೊರಟಿರುವುದು ದುರಂತ, ಪ್ರಥಮ ಬಾರಿಗೆ ಪಠ್ಯ ಪುಸ್ತಕವನ್ನು ರಾಜಕೀಕರಣಗೊಳಿಸಿದ ಖ್ಯಾತಿ ಕಾಂಗ್ರೆಸ್ ಗೆ ಸಲ್ಲುತ್ತದೆ ಎಂದು ಆಕ್ರೋಶ ಹೊರಹಾಕಿದರು.
ಪಠ್ಯ ಪರಿಷ್ಕರಣೆ ಸಮಿತಿ ಶಿಫಾರಸ್ಸಿನ ಮೇರೆಗೆ ಪಠ್ಯ ಪರಿಷ್ಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ, ಪರಿಷ್ಕರಣೆ ಮಾಡುವ ಪಠ್ಯ ಯಾವುದು, ಪರಿಷ್ಕರಿಸಲು ಕಾರಣವೇನು? ಎಂಬುದನ್ನು ಶಿಕ್ಷಣ ಸಚಿವರು ಯಾವ ವಿಷಯವನ್ನು ಸ್ಪಷ್ಟವಾಗಿ ಹೇಳಿಲ್ಲ, ಹೀಗಾಗಿ ಒಂದು ರೀತಿ ಗೊಂದಲದ ಗೂಡಾಗಿ ಪರಿಗಣಿತವಾಗಿದೆ, ಕೂಡಲೇ ಎಲ್ಲ ವಿವರಗಳನ್ನು ಸಮಗ್ರವಾಗಿ ಶಿಕ್ಷಣ ಸಚಿವರು ಬಹಿರಂಗಗೊಳಿಸಬೇಕು ಎಂದರು.
ಕೆಲವೇ ಕೆಲವು ವಿಚಾರವಾದಿ ಹಾಗೂ ಎಡಪಂಥಿಯರನ್ನು ಇಟ್ಟುಕೊಂಡು ಪಠ್ಯ ಪರಿಷ್ಕರಣೆ ಮಾಡಿರುವುದು ಸರಿಯಲ್ಲ. ಇಡೀ ದೇಶ 2023ರ ರಾಷ್ಟ್ರೀಯ ಪಠ್ಯಕ್ರಮ ಅನುಸರಿಸುತ್ತಿದ್ದರೆ ಇದೀಗ ರಾಜ್ಯ ಸರ್ಕಾರ ಮತ್ತೊಮ್ಮೆ ಪಠ್ಯಪರಿಷ್ಕರಣೆ ಮಾಡುವುದರ ಉದ್ದೇಶವೇನು? ಎಂದು ಶಹಾಪೂರ ಪ್ರಶ್ನಿಸಿದರು.
ಪರಿಷ್ಕೃತ ಪಠ್ಯಕ್ರಮದ ಕುರಿತು ಈಗಲೇ ಚರ್ಚೆಯಾಗಲಿ. ಮುದ್ರಣಕ್ಕೆ ಮೊದಲು ಶಿಕ್ಷಣ ತಜ್ಞರು ಚರ್ಚೆ ಮಾಡಲಿ. ಭವಿಷ್ಯದಲ್ಲಿ ಆಗುವ ಅನಾಹುತಗಳಿಗೆ, ಗೊಂದಲಗಳಿಗೆ ಈಗಲೇ ತೆರೆ ಎಳೆಯಬೇಕು, ಪಠ್ಯಪುಸ್ತಕ ಮುದ್ರಣಕ್ಕೆ ನೂರಾರು ಕೋಟಿ ಖರ್ಚಾಗುತ್ತದೆ, ಹೀಗಾಗಿ ಮೊದಲೇ ಅದು ಪರಿಷ್ಕರಣೆಯಾಗಬೇಕು, ಮುದ್ರಣಗೊಂಡು ಬಂದ ಮೇಲೆ ಪುನ: ಪರಿಷ್ಕೃತ ಮುದ್ರಣ ಎಂದರೆ ಸರ್ಕಾರದ ಬೊಕ್ಕಸಕ್ಕೂ ದೊಡ್ಡ ಹಾನಿ ಎಂದು ಕಳವಳ ವ್ಯಕ್ತಪಡಿಸಿದರು.
ಈಗಾಗಲೇ ಅಧಿಕಾರಕ್ಕೆ ಬಂದ ಒಂಬತ್ತು ತಿಂಗಳಲ್ಲಿ ಒಂದು ಸಲ ಪರಿಷ್ಕರಣೆ ಮಾಡಲಾಗಿದೆ. ಇದೀಗ ಎರಡನೇ ಬಾರಿ ಪರಿಷ್ಕರಿಸಲಾಗುತ್ತಿದೆ. ಹಾಗಾದರೆ ಈ ಮೊದಲು ಪರಿಷ್ಕೃತ ಪಠ್ಯ ಬೋಧಿಸಿದ್ದು ತಪ್ಪು ಎಂದಂತಾಯಿತಲ್ಲ? ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಶಿಕ್ಷಣ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿ ಸಾಬೀತಾಗುತ್ತದೆ ಎಂದರು.
ಹಿರಿಯ ನ್ಯಾಯವಾದಿ ಬಸವರಾಜ ಯಾದವಾಡ, ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.