ವಿಜಯಪುರ: ಜಗತ್ತಿನ ಶೇ.80 ರಷ್ಟು ಜನರು ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ನರಗಳ ದೌರ್ಬಲ್ಯ ಕುರುಡುತನಕ್ಕೆ ಕಾರಣವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ್ ಆಸ್ಪತ್ರೆ ನೇತ್ರ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಮುಧೋಳ ಹೇಳಿದ್ದಾರೆ.
ಬಿ.ಎಲ್.ಡಿ.ಇ ಡಿಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ್ ವೈದ್ಯಕಿಯ ಕಾಲೆಜು, ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಗ್ಲೊಕೋಮಾ ಕಾಯಿಲೆ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಭಾರತದಲ್ಲಿ 4.50 ಮಿಲಿಯನ್ ಮತ್ತು ಜಗತ್ತಿನಲ್ಲಿ 80 ಮಿಲಿಯನ್ ಜನರು ಗ್ಲೊಕೋಮಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯನ್ನು ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಕಣ್ಣಿನ ಪೊರೆ ನಂತರ ನರಗಳ ದೌರ್ಬಲ್ಯದಿಂದ ಕುರುಡರಾಗಬಹುದು. ಗ್ಲೊಕೋಮಾ ಕಾಯಿಲೆ ಹೊಂದಿರುವ ರೋಗಿಗಳಲ್ಲಿ ತಲೆನೋವು, ದೃಷ್ಟಿ ಕ್ಷೀಣಿಸುವುದು ಹಾಗೂ ಕೆಲವರಲ್ಲಿ ಲಕ್ಷಣಗಳು ಕಂಡು ಬರದಿರಬಹುದು. ಈ ಕಾಯಿಲೆಯು 40ವರ್ಷಕ್ಕಿಂತ ಮೇಲ್ಪಟ್ಟ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಧಿಕ ರಕ್ತದೊತ್ತಡ, ಮಧುಮೇಹ ರೊಗಿಗಳಲ್ಲಿ ಹಾಗೂ ದಪ್ಪ ಕನ್ನಡಕವನ್ನು ಬಳಸುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಎಂದು ಅವರು ಹೇಳಿದರು.
ಕಣ್ಣಿನ ಸಮಸ್ಯೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ನೇತ್ರ ವಿಭಾಗ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಮಾರ್ಚ 16ರ ವರೆಗೆ ಗ್ಲೊಕೋಮಾ ಉಚಿತ ಶಿಬಿರ ಆಯೋಜಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸಂಪತ ಎಂ. ಗುಣಾರಿ ಮಾತನಾಡಿದರು.
ಬಿ.ಎಲ್.ಡಿ.ಇ ಡಿಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಗ್ಲೊಕೋಮಾ ಜಾಗೃತಿ ಕರಪತ್ರಗಳನ್ನು ಬಿಡಗಡೆ ಮಾಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಅಧಿಕ್ಷಕರು ಡಾ. ರಾಜೇಶ ಹೊನ್ನುಟಗಿ, ಡಾ. ಸುನೀಲ ಜಿ. ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

