ವಿಜಯಪುರ: ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನು ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ.
7 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಈಗ ತನ್ನ 8 ನೇ ಆವೃತ್ತಿಯೊಂದಿಗೆ ಮತ್ತೆ ಕರುನಾಡನ್ನ ಕುಣಿಸಲು ತಯಾರಾಗಿದೆ. ಈಗಾಗಲೇ ಸಾಕಷ್ಟು ಯುವ ನೃತ್ಯ ನಿರ್ದೇಶಕರನ್ನ ಸ್ಯಾಂಡಲ್ ವುಡ್ಡಿಗೆ ನೀಡಿರುವ ಈ ರಿಯಾಲಿಟಿ ಶೋ ಮತ್ತಷ್ಟು ನೃತ್ಯ ನಿರ್ದೇಶಕರನ್ನ ಹುಟ್ಟು ಹಾಕುವ ಕೆಲಸವನ್ನ ಈ ಆವೃತ್ತಿಯಲ್ಲಿ ಮತ್ತೆ ಮಾಡಲಿದೆ.
ಇದರ ಜೊತೆಜೊತೆಗೆ ಸತತ 4 ಹಿಟ್ ಸೀಸನ್ನುಗಳನ್ನ ಕೊಟ್ಟಿರುವ ಕರುನಾಡಿನ ನೆಚ್ಚಿನ ರಿಯಾಲಿಟಿ ಶೋಗಳಲ್ಲಿ ಒಂದಾದ ಕಾಮಿಡಿ ಕಿಲಾಡಿಗಳು ಈಗಾಗಲೇ ಸಾಕಷ್ಟು ಕಾಮಿಡಿ ಕಲಾವಿದರನ್ನ ಕರುನಾಡಿಗೆ ನೀಡಿರುವುದು ಈಗ ಇತಿಹಾಸ. ವೇದಿಕೆಗಾಗಿ ಕಾಯುತ್ತಿರುವ ಅದೆಷ್ಟೋ ಹಾಸ್ಯ ನಟನಟಿಯರ ಕನಸನ್ನ ನನಸು ಮಾಡುತ್ತಿರುವ ಈ ರಿಯಾಲಿಟಿ ಶೋ ಈ ಬಾರಿ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಎಂಬ ಹೊಸ ರೂಪದಲ್ಲಿ ಕರುನಾಡಿನ ಮುಂದೆ ಬರಲಿದೆ.
ಈ ಹಂತದಲ್ಲಿ ಇದಕ್ಕೆ
ಪೂರ್ವಬಾವಿ ತಯಾರಿ ಎಂಬಂತೆ ಆಡಿಷನ್ ಪ್ರಕ್ರಿಯೆ ಕರುನಾಡಿನಾದ್ಯಂತ ಶುರುವಾಗಿದೆ.
ಇದೇ ಮಾರ್ಚ್ 16 ರಂದು ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಪ್ರಗತಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಆರ್.ಟಿ.ಓ ಕಛೇರಿ ಹಿಂಭಾಗ, ರಾಜಾಜಿನಗರ,
ವಿಜಯಪುರ, ಇಲ್ಲಿ ಆಡಿಷನ್ ನಡೆಯಲಿದೆ.
ಆಡಿಷನಲ್ಲಿ ಭಾಗವಹಿಸಲು ಇಚ್ಚಿಸುವವರು ಅಡ್ರಸ್ ಪ್ರೂಪ್ ಜೆರಾಕ್ಸ್ ಜೊತೆ ಎರಡು ಪಾಸ್ ಪೋರ್ಟ್ ಸೈಜ್ ಪೋಟೊದೊಂದಿಗೆ ಆಡಿಷನ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದ್ದು, ಜೀ ಕನ್ನಡ ವಾಹಿನಿಯು ಈ ಆಡಿಷನ್ಗೆ ಯಾವುದೇ ಶುಲ್ಕ ವಿಧಿಸಿರುವುದಿಲ್ಲವೆಂದು ಸ್ಪಷ್ಟ ಪಡಿಸಿದೆ. ಹಾಗೂ ವಾಹಿನಿಯ ಹೆಸರಲ್ಲಿ ಹಣ ಕೇಳುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಮಾ.೧೬ರಂದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್
Related Posts
Add A Comment

