ಸಿಂದಗಿ: ಸಂವಿಧಾನವನ್ನೇ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ನಡೆಯನ್ನು ನಮ್ಮ ಶಾಖೆಯು ಖಂಡಿಸುತ್ತದೆ ಎನ್‌ಎಸ್‌ಯುಐ ಘಟಕದ ತಾಲೂಕಾಧ್ಯಕ್ಷ ಷಹಜಹಾನ ಗೋಲಗೇರಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದ ಎದುರು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸಿಂದಗಿ ತಾಲೂಕು ಶಾಖೆಯ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಅಮಾನತ್ತು ಮಾಡಬೇಕು. ದೇಶದ ಪವಿತ್ರ ಗ್ರಂಥ ಎಂದು ನಂಬಿರುವ ಭಾರತದ ಸಂವಿಧಾನದ ಬಗ್ಗೆ ಬಹಳ ಹಗುರವಾಗಿ ಮಾತನಾಡಿ ಸಮಾಜದಲ್ಲಿ ಶಾಂತಿಯನ್ನು ಕದಡಿಸುವ ಜೊತೆಗೆ ವಿಷಬೀಜ ಬಿತ್ತುವ ಕಲಸವನ್ನು ಮಾಡುತ್ತಿರುವ ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮವಹಿಸಬೇಕು ಎಂದು ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ಈ ವೇಳೆ ಉಪಾಧ್ಯಕ್ಷ ಸಿದ್ದು ಚಾವರ್, ಪ್ರಧಾನ ಕಾರ್ಯದರ್ಶಿ ಹುಸೇನ್ ಆಳಂದ್, ಸಂಗಮೇಶ್ ಮನಗೂಳಿ, ರವಿ ಬಂಡಗಾರ, ಸಿದ್ದು ಬೊಮ್ಮನಜೋಗಿ, ಬಂದೇನವಾಜ್, ಸುನೀಲ ಸೇರಿದಂತೆ ಹಲವು ಕಾರ್ಯಕರ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

