ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದ ಬಿಜೆಪಿ ಯುವ ಮುಖಂಡ ರವಿಕಾಂತ ನಾಯ್ಕೋಡಿ ಅವರನ್ನು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗದ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಆರ್. ರಘು (ಕೌಟಿಲ್ಯ) ಆದೇಶ ಹೊರಡಿಸಿದ್ದಾರೆ.
ಈ ವೇಳೆ ಪತ್ರಿಕಾ ಹೇಳಿಕಾ ಹೇಳಿಕೆ ನೀಡಿದ ರವಿಕಾಂತ ಅವರು, ರಾಜ್ಯದ ನಾಯಕರು ನನ್ನ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟು ತಳಮಟ್ಟದಿಂದ ಪಕ್ಷ ಸಂಘಟಿಸುವ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗಳು ಹುಸಿ ಹೋಗದಂತೆ ಸರ್ವ ಸಮಾಜದ ಜನರೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಪಕ್ಷದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ. ಮುಂಬರುವ ಲೋಕಸಭಾ ಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

